ಶಹಾಪುರ: ಪ್ರಶಸ್ತಿ ಪುರಸ್ಕಾರಗಳು ಮನುಷ್ಯನ ಜವಾಬ್ದಾರಿ ಹೆಚ್ಚಿಸುವುದರ ಜೊತೆಗೆ ಮತ್ತಷ್ಟು ಕೆಲಸ ಮಾಡುವುದಕ್ಕೆ ಸ್ಫೂರ್ತಿ ನೀಡುತ್ತವೆ ಎಂದು ಖ್ಯಾತ ಹಿರಿಯ ಶಿಶು ಸಾಹಿತಿಗಳಾದ ಚಂದ್ರಕಾಂತ ಕರದಳ್ಳಿ ಹೇಳಿದರು.
ಶಹಾಪುರ ನಗರದ ಕಿಯೋನಿಕ್ಸ್ ಕಂಪ್ಯೂಟರ್ ಫ್ರಾಂಚೈಸಿಯಲ್ಲಿ ಸಂಧ್ಯಾ ಸಾಹಿತ್ಯ ವೇದಿಕೆಯ ವತಿಯಿಂದ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಇತ್ತೀಚೆಗೆ ಚಂದ್ರಕಾಂತ ಕರದಳ್ಳಿ ಯವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಕೊಡಮಾಡುವ ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದ ಸಲುವಾಗಿ ಅವರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಖ್ಯಾತ ಹಿರಿಯ ಸಾಹಿತಿಗಳು ಹಾಗೂ ರಂಗಭೂಮಿ ಕಲಾವಿದರಾದ ಎಲ್.ಬಿ.ಕೆ ಆಲ್ದಾಳರು ಮಾತನಾಡಿ ಪ್ರಶಸ್ತಿ ಪುರಸ್ಕಾರ ಗಳಿಗಾಗಿ ಬೆನ್ನುಹತ್ತ ಬಾರದು ನಾವು ಕ್ರಿಯಾತ್ಮಕವಾಗಿ, ಸೃಜನಾತ್ಮಕವಾಗಿ, ಕ್ರಿಯಾಶೀಲರಾಗಿ ಕೆಲಸ ಮಾಡುತ್ತಾ ಹೋದರೆ ಪ್ರಶಸ್ತಿಗಳೇ ನಮ್ಮನ್ನು ಹುಡುಕಿಕೊಂಡು ಬರುತ್ತವೆ ಎಂದು ಹೇಳಿದರು.
ಈ ಸಮಾರಂಭದ ವೇದಿಕೆಯ ಮೇಲೆ ಸಂಧ್ಯಾ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ರವಿ ಹಿರೇಮಠ, ಹಾಗೂ ಶಹಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಗುರುಬಸಯ್ಯ ಗದ್ದುಗೆ ಉಪಸ್ಥಿತರಿದ್ದರು.