ಕಲಬುರಗಿ: ಪ್ರಸಕ್ತ 2019-20ನೇ ಸಾಲಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ ನಡೆಸುವ ಚಿತ್ರಕಲಾ ಶಿಬಿರ, ಕಾರ್ಯಾಗಾರ, ತಿಂಗಳಚಿತ್ರ ಕಲಾಪ್ರದರ್ಶನ ಹಾಗೂ ಇತರೆ ಕಲಾ ಚಟುವಟಿಕೆಗಳಿಗಾಗಿ ಆಯ್ಕೆ ಮಾಡಲು ಆಸಕ್ತ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.
ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು 2019ರ ಜುಲೈ 31 ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‌ಸೈಟ್: www.lalitkalakarnataka.org ಸಂಪರ್ಕಿಸಲು ಕೋರಲಾಗಿದೆ.