ಕಲಬುರಗಿ: ಇಲ್ಲಿನ ಬಂಬೂಬಜಾರ ರಸ್ತೆಯ ಮಾರ್ಗವಾಗಿ ಬಸವಕಲ್ಯಾಣಕ್ಕೆ ಹೋಗುವ ರಸ್ತೆಯೂ ಸಂಪೂರ್ಣ ಹಾಳಾಗಿದ್ದು ವಾಹನಗಳ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ ಎಂದು ಕರವೇ(ಕನ್ನಡಿಗರ ಬಣ) ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಆರೋಪಿಸಿದರು.
ಪ್ರತಿನಿತ್ಯ ನೂರಾರು ವಾಹನಗಳು ಬಂಬೂಬಜಾರ ರಸ್ತೆಯಿಂದ ಸಂಚರಿಸುತ್ತಿದ್ದು ರಸ್ತೆಯೂ ಅವ್ಯವಸ್ಥೆಯಿಂದಾಗಿ ಸಕಾಲಕ್ಕೆ ಪ್ರಯಾಣಿಕರು, ವಿದ್ಯಾರ್ಥಿಗಳು, ಹಾಗೂ ಸಾರ್ವಜನಿಕರು ತಮ್ಮ ತಮ್ಮ ಕೆಲಸಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನ ಈ ಮಾರ್ಗದಲ್ಲಿ ಪ್ರಯಾಣ ಮಾಡುತ್ತಾರೆ. ತಿಂಗಳು ಕಳೆದರೂ ಕೆಲಸ ಪ್ರಾರಂಭಿಸಿಲ್ಲ. ಗುತ್ತಿಗೆದಾರರು ಎಂಜಿನಿಯರ್ ಆವರನ್ನು ಕೇಳಿದರೆ ಕೆಲಸವನ್ನು ಪ್ರಾರಂಭಿಸುತ್ತೇವೆ ಎಂದು ಹೇಳುತ್ತಾರೆ.
ಈ ರಸ್ತೆಯಲ್ಲಿ ವಾಹನ ನಡೆಸುವ ಚಾಲಕರು ಹಿಡಿ ಶಾಪ ಹಾಕುತ್ತಿದ್ದಾರೆ. ನಿನ್ನೆ ಬಿದ್ದ ಮಳೆಗೆ ರಸ್ತೆ ಎಲ್ಲಾ ಕೆಸರು ಗದ್ದೆಯಂತಾಗಿದ್ದು ಪಾದಚಾರಿಗಳು ಸಂಚರಿಸಲು ತುಂಬಾ ಕಷ್ಟ ಪಡಬೇಕಾಯಿತು.ರಸ್ತೆ ದುರಸ್ತಿ ಮಾಡದಿರುವ ಬಗ್ಗೆ ಸಾರ್ವಜನಿಕರು ಇಲಾಖೆ ಆಧಿಕಾರಿಗಳ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೂಡಲೇ ಈ ರಸ್ತೆ ದುರಸ್ತಿ ಕೆಲಸ ಪ್ರಾರಂಭಿಸಿ ಸಾರ್ವಜನಿಕರಿಗೆ ಆನುಕೂಲ ಮಾಡಿಕೊಡುವಂತೆ ಕರವೇ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಶರಣು ಹೊಸಮನಿ, ರಮೇಶ ಪೂಜಾರಿ, ರವಿ ಬೆಲ್ಲದ, ಅಶ್ವಿನ್ ರಂಗದಾಳ, ಮಾದೇಶ ಬಿರಾದಾರ ಸೇರಿದಂತೆ ಇನ್ನಿತರರು ಒತ್ತಾಯಿಸಿದ್ದಾರೆ.