ಕೌಟುಂಬಿಕ ಕಲಹ: ಸೇಡಂ ಪಟ್ಟಣದಲ್ಲಿ ಡಬಲ್ ಮರ್ಡರ್

0
76

ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿ ಹಾಗೂ ಮಗಳನ್ನೇ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಸೇಟಂ ಪಟ್ಟಣದಲ್ಲಿ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದ ಕಲಬುರಗಿ ನಿವಾಸಿ ದಿಗಂಬರ ಹಣಮಂತಪ್ಪ ಗಾಂಜಲಿ (47) ಕೊಲೆ ಮಾಡಿದ ಆರೋಪಿ.

Contact Your\'s Advertisement; 9902492681

ಈತ ತನ್ನ ಪತ್ನಿ ಜಗದೇವಿ (35) ಹಾಗೂ ಮಗಳು ಪ್ರಿಯಾಂಕಾ (11) ಇಬ್ಬರನ್ನೂ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಕೆಲ ತಿಂಗಳುಗಳ ಹಿಂದಷ್ಟೇ ಕಲಬುರಗಿಯಿಂದ ಸೇಡಂ ಪಟ್ಟಣದಲ್ಲಿ ಕುಟುಂಬ ಸಮೆತ ನೆಲೆಸಿತ್ತು.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಈ ಕುರಿತು ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here