ಕಲಬುರಗಿ: ಸೆ.೨೫ ರಂದು ಆಳಂದ ತಾಲೂಕಿನ ಮಾದನಹಿಪ್ಪರ್ಗಾ ಗ್ರಾಮದಲ್ಲಿ ಜರುಗಲಿರುವ ಜನಾಶೀರ್ವಾದ ಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಜಿ.ಪಂ ಮಾಜಿ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಹಾಗೂ ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಮನವಿ ಮಾಡಿದ್ದಾರೆ.
ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸರ್ಕಾರದ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವರಾಗಿ ಪ್ರಥಮ ಬಾರಿಗೆ ಆಳಂದ ತಾಲೂಕಿಗೆ ಆಗಮಿಸುತ್ತಿರುವ ಸಚಿವ ಭಗವಂತ ಖೂಬಾ ಅವರನ್ನು ಆಳಂದ ತಾಲೂಕಿನ ವತಿಯಿಂದ ಸನ್ಮಾನಿಸಲಾಗುತ್ತಿದೆ.
ಜನಾಶೀರ್ವಾದ ಯಾತ್ರೆಯ ಪ್ರಯುಕ್ತ ಅಂದು ಬೆಳಿಗ್ಗೆ ೯ ಗಂಟೆಗೆ ಆಳಂದ ಪಟ್ಟಣದ ತಹಸೀಲ ಕಾರ್ಯಲಯದಿಂದ ಪ್ರವಾಸಿ ಮಂದಿರದವರೆಗೆ ಬೈಕ್ ರ‍್ಯಾಲಿ ಜರುಗಲಿದೆ. ನಂತರ ಮಧ್ಯಾಹ್ನ ೧೨ ಗಂಟೆಗೆ ಮಾದನಹಿಪ್ಪರ್ಗಾ ಗ್ರಾಮದ ಶಿವಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಯಾತ್ರೆಯ ಬಹಿರಂಗ ಸಮಾವೇಶ ಜರುಗಲಿದೆ ಎಂದು ತಿಳಿಸಿದ್ದಾರೆ.
ಯಾತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಸೇರಿದಂತೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಆದ್ದರಿಂದ ತಾಲೂಕಿನ ಪಕ್ಷದ ಪದಾಧಿಕಾರಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.