ಕಲಬುರಗಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಮೊಹಮ್ಮದ್ ನಜೀರ್ ಅವರು ಸೆಪ್ಟೆಂಬರ್ 28ಕ್ಕೆ ಜಿಲ್ಲೆಗೆ ಭೇಟಿ ನೀಡಲಿದ್ದರೆ.
ಅಂದು ಮಧ್ಯಾಹ್ನ 12: 30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಸಂಘ, ಸಂಸ್ಥೆಗಳ ಮುಖಂಡರ ಹಾಗೂ ಸಾರ್ವಜನಿಕರೊಂದಿಗೆ ಕುಂದುಕೊರತೆಗಳ ಸಭೆ ನಡೆಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಮೂದ್ ಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.