ಯಾದಗಿರಿ ಜಿಲ್ಲೆಗೆ ಡಿಸಿಸಿ ಬ್ಯಾಂಕ್ ನೀಡಲು ಕುಮಾರಸ್ವಾಮಿ ಸೇನೆ ಒತ್ತಾಯ

0
42
ಯಾದಗಿರಿ ಜಿಲ್ಲೆಗೆ ಡಿಸಿಸಿ ಬ್ಯಾಂಕ್ ನೀಡುವಂತೆ ಒತ್ತಾಯಿಸಿ ಹೆಚ್.ಡಿ.ಕುಮಾರಸ್ವಾಮಿ ಸೇನೆಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಸುರಪುರ; ಯಾದಗಿರಿ ಜಿಲ್ಲೆಯಾಗಿ ಹಲವಾರು ವರ್ಷಗಳಾದರು ಇದುವರೆಗೆ ಯಾದಗಿರಿ ಜಿಲ್ಲೆಗೆ ಡಿಸಿಸಿ ಬ್ಯಾಂಕ್ ನೀಡದೆ ಜಿಲ್ಲೆಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಸೇನೆಯ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಒತ್ತಾಯಿಸಿದರು.

ನಗರದ ಡಾ:ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಸೇನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಇದುವರೆಗೆ ಕಲಬುರ್ಗಿ ಜಿಲ್ಲಾ ಡಿಸಿಸಿ ಬ್ಯಾಂಕ್‌ನ್ನೆ ಮುಂದುವರೆಸುವ ಮೂಲಕ ಯಾದಗಿರಿ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ.ಕಲಬುರ್ಗಿ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿ ಇರುವುದರಿಂದ ಆ ಜಿಲ್ಲೆಯ ರೈತರಿಗೆ ಹೆಚ್ಚು ಅನುಕೂಲ ಕಲ್ಪಿಸುವ ಮೂಲಕ ಯಾದಗಿರಿ ಜಿಲ್ಲೆಯ ರೈತರು ಆರ್ಥಿಕ ಸಹಾಯದಿಂದ ವಂಚಿತರಾಗುತ್ತಾರೆ.

Contact Your\'s Advertisement; 9902492681

ಇದರಿಂದ ಜಿಲ್ಲೆಯ ರೈತರು ಸಂಕಷ್ಟ ಹೆದರಿಸುವಂತಾಗಿದೆ.ಆದ್ದರಿಂದ ಕೂಡಲೆ ಸರಕಾರ ಯಾದಗಿರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಜಿಲ್ಲಾ ಕಚೇರಿ ಆರಂಭಿಸ ಬೇಕು ಮತ್ತು ಈಗಾಗಲೆ ಮಳೆಗಾಲ ಆರಂಭವಾಗಿದ್ದರಿಂದ ರೈತರಿಗೆ ಆರ್ಥಿಕತೆಯ ತೊಂದರೆ ಇದ್ದು ಕೂಡಲೆ ಜಿಲ್ಲೆಯ ಎಲ್ಲಾ ವಿಎಸ್‌ಎಸ್‌ಎನ್ ಸಹಕಾರಿ ಬ್ಯಾಂಕ್‌ಗಳಿಂದ ಸಾಲ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಸಿಬ್ಬಂದಿ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗೋಪಾಲ ಬಾಅಗಲಕೋಟೆ, ಮಾನಯ್ಯ ದೊರೆ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ಬಸವರಾಜ ಕವಡಿಮಟ್ಟಿ,ದೇವಪ್ಪ ದೇವರಮನಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here