ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸ್ವಚ್ಛತಾ ಆಂದೋಲನ ಜಾಗೃತಿ ಜಾಥಾ

0
85

ಸುರಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಹಾಗು ಲಾಲ ಬಹಾದ್ಧೂರ್ ಶಾಸ್ತ್ರಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಆಂದೋಲನ ಹಾಗು ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಶನಿವಾರ ಬೆಳಿಗ್ಗೆ ನಗರದ ಎಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿನ ಎಲ್ಲಾ ಮೇಲ್ವಿಚಾರಕರು ಮತ್ತು ವಿದ್ಯಾರ್ಥಿಗಳು ತಾಲೂಕು ಪಂಚಾಯತಿ ಆವರಣದಲ್ಲಿ ಸೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಪ್ಪಾರಡ್ಡಿ ಮಾಲಿ ಪಾಟೀಲ್ ಅವರ ನೇತೃತ್ವದಲ್ಲಿ ತಾಲೂಕು ಪಂಚಾಯತಿ ಆವರಣ ಸ್ವಚ್ಛಗೊಳಿಸಿದರು.

Contact Your\'s Advertisement; 9902492681

ನಂತರ ಹಳೆ ಬಸ್ ನಿಲ್ದಾಣ ಶ್ರೀ ಮಹರ್ಷೀ ವಾಲ್ಮೀಕಿ ವೃತ್ತದ ಮೂಲಕ ದರಬಾರ ರಸ್ತೆ ಮಾರ್ಗವಾಗಿ ಮಹಾತ್ಮ ಗಾಂಧಿ ವೃತ್ತದವರೆಗೆ ಸ್ವಚ್ಛತೆ ಜಾಗೃತಿ ಕುರಿತು ಜಾಥಾ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.ಅಲ್ಲದೆ ಮಹಾತ್ಮ ಗಾಂಧಿ ವೃತ್ತದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ನಂತರ ಶ್ರೀ ಪ್ರಭು ಕಾಲೇಜ್ ಮೈದಾನದವರೆಗೆ ಜಾಥಾ ನಡೆಸಿ ನಂತರ ಕಾಲೇಜು ಮೈದಾನ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಮಾಲಿಪಾಟೀಲ್ ಮಾತನಾಡಿ,ಮಹಾತ್ಮ ಗಾಂಧೀಜಿಯವರ ಕನಸಾಗಿದ್ದ ಗ್ರಾಮ ಸ್ವರಾಜ್ಯ ಅಂಗವಾಗಿ ನಮ್ಮ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ಮಾರ್ಗದರ್ಶನದಂತೆ ಇಂದು ನಾಡಿನಾದ್ಯಂತ ಇರುವ ಎಲ್ಲಾ ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಸಲಾಗುತ್ತಿದೆ. ಅದಂತೆ ನಮ್ಮ ಸುರಪುರ ಮತ್ತು ಹುಣಸಗಿ ತಾಲೂಕಿನ ಎಲ್ಲಾ ನಮ್ಮ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯಕ್ರ ಜರುಗಲಿದೆ ಎಂದರು.

ಈ ಸಂದರ್ಭದಲ್ಲಿ ನಗರದ ವಿವಿಧ ವಿದ್ಯಾರ್ಥಿಗಳ ವಸತಿ ನಿಲಯಗಳ ಮೇಲ್ವಿಚಾರಕರಾದ ಯಂಕಪ್ಪ ದೊರೆ,ಮೆಹತಾಬ್,ರೂಪವತಿ ಹಾಗು ಸಿಬ್ಬಂದಿಗಳಾದ ಮಹಾದೇವಪ್ಪ,ಪ್ರಕಾಶ್,ಅಬ್ದುಲ್ ಖಾದರ್,ಕಾವೇರಿ,ಮಂಜುಳಾ,ಭೀಮಾಬಾಯಿ, ಬಸವರಾಜ ನಾಯಕ್, ಮಹಾದೇವಿ,ವಿರೇಶ ಹಾಗು ಮಲ್ಲಿಕಾರ್ಜುನ ಸೇರಿದಂತೆ ಇತರೆ ಸಿಬ್ಬಂದಿಗಳು ಮತ್ತು ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here