ಶಹಾಪುರ: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಹಾಪುರ ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂದುಗಡೆ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಶಿಕ್ಷಕರ ವರ್ಗಾವಣೆಯಲ್ಲಿರು ನ್ಯೂನತೆಗಳನ್ನು ಬೇಗನೇ ಸರಿಪಡಿಸಿ ಎಲ್ಲ ಶಿಕ್ಷಕರಿಗೆ ಅನುಕೂಲವಾಗುವಂತೆ ಮಾಡಿಕೊಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ಪ್ರತಿಭಟನೆಯಲ್ಲಿ ಶಹಾಪುರ ತಾಲ್ಲೂಕಿನ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕಿಯರು ಜೊತೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.