ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪಾ ಸಭಾಮಂಟಪದಲ್ಲಿಂದು ನ್ಯಾಷನಲ್ ಬೋರ್ಡ ಆಫ್ ಆಕ್ರಿಡಿಟೇಷನ್ ಪ್ರೋಸೆಸ್ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಾಗಾರವನ್ನು ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ನಿರಂಜನ.ವಿ.ನಿಷ್ಠಿ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಸಮ ಕುಲಪತಿ ಪ್ರೊ.ವಿ.ಡಿ.ಮೈತ್ರಿ, ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಡೀನ್ ಡಾ.ಲಕ್ಷ್ಮೀ ಪಾಟೀಲ ಮಾಕಾ, ಡಾ.ಎಸ್.ಜಿ.ಡೊಳ್ಳೆಗೌಡರ ಹಾಗೂ ಅತಿಥಿ ಉಪನ್ಯಾಸಕರಾದ ಡಾ.ಅನೂಪ.ಎಸ್.ವಿಭೂತೆ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.