ನೆಮ್ಮದಿ ಜೀವನ ನಡೆಸಲು ಕಾನೂನು ಅರಿವು ಅಗತ್ಯ-ಮಲ್ಲೇಶಿ

0
34

ಶಹಾಬಾದ: ಸಂವಿಧಾನದಲ್ಲಿ ಅಳವಡಿಸಿರುವ ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಪ್ರತಿನಿತ್ಯದ ಚಟುವಟಿಕೆಗಳನ್ನು ನೆಮ್ಮದಿಯಾಗಿ ನಡೆಸಲು ಕಾನೂನು ಅರಿವು ಪಡೆಯುವುದು ಅಗತ್ಯ ಎಂದು ನಗರದ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲೇಶಿ ಪರಶುರಾಮ ಮೋಹಿತೆ ಅಭಿಪ್ರಾಯಪಟ್ಟರು.

ಅವರು ಕಾನೂನು ಸೇವಾ ಸಮಿತಿ ಚಿತ್ತಾಪೂರ ಮತ್ತು ನ್ಯಾಯಾವಾಧಿಗಳ ಸಂಘದ ವತಿಯಿಂದ ನಗರಸಭೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Contact Your\'s Advertisement; 9902492681

ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಪ್ರಸ್ತುತ ಸಂದರ್ಭದಲ್ಲಿ ಅವಶ್ಯವಿದೆ. ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ. ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು, ಆದರೂ ನಮ್ಮ ದೈನಂದಿನ ಜೀವನ ಯಾವುದೇ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಸಾಗಲು ಅಲ್ಪ ಪ್ರಮಾಣದಲ್ಲಾದರೂ ಕಾನೂನು ಜಾಗೃತಿ ಪಡೆಯಬೇಕು ಎಂದು ಹೇಳಿದರು.

ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ಹಿಂದೆ ಕಾನೂನು ಎಂಬುದು ನ್ಯಾಯಾಲಯದ ನಾಲ್ಕು ಗೋಡೆಗೆ ಮಾತ್ರ ಸೀಮಿತವಾಗಿತ್ತು. ಈಗ ಮನೆ ಬಾಗಿಲಿಗೆ ಜನಸಾಮಾನ್ಯರ ಅನೂಕೂಲಕ್ಕಾಗಿ ಕಾನೂನು ಅರಿವು ನೆರವನ್ನು ತಲುಪಿಸಲಾಗುತ್ತಿದೆ. ನೆಮ್ಮದಿಯುತ ಬದುಕು ನಮ್ಮದಾಗಬೇಕಾದರೆ ಕಾನೂನಿನ ಬಗ್ಗೆ ತಿಳಿದುಕೊಳ್ಳುವುದು ಕಡ್ಡಾಯ ಎಂದರು.

ನಗರಸಭೆಯ ಪೌರಾಯುಕ್ತ ಡಾ.ಕೆ. ಗುರಲಿಂಗಪ್ಪ ಮಾತನಾಡಿ, ಜನರಲ್ಲಿ ಕಾನೂನು ಅರಿವಿನ ಕೊರತೆ ಯಿಂದಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಹೀಗಾಗಿ ಪ್ರತಿ ಯೊಬ್ಬರೂ ಕಾನೂನು ಬಗ್ಗೆ ಅರಿಯುವ ಅನಿವಾರ್ಯತೆಯಿದೆ ಎಂದರು.

ಪಿಐ ಸಂತೋಷ ಹಳ್ಳೂರ್,ನ್ಯಾಂiiವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಶಿಂಧೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರಿ ಸಹಾಯಕ ಅಭಿಯೋಜಕರಾದ ಸುನೀತಾ ಮರತೂರ, ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here