ಆಳಂದ: ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಗುರುವಾರ ಆಳಂದ ಪಟ್ಟಣದ ಎಸ್‌ಆರ್‌ಜಿ ಫೌಂಡೇಶನ್ ಮತ್ತು ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಆವರಣದಲ್ಲಿ ಕನ್ನಡದ ಹಾಡುಗಳ ಡಿಂಡಿಂ ಮೊಳಗಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ವಿವಿಧ ಶಾಲಾ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಏಕಕಾಲದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ರಾಷ್ಟ್ರಗೀತೆ ಜೊತೆ ಕನ್ನಡದ ಜನಪ್ರಿಯ ಹಾಡುಗಳಾದ ಬಾರಿಸು ಕನ್ನಡ ಡಿಂಡಿಂವ, ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳಿಗೆ ಧ್ವನಿಗೂಡಿಸಿದರು.
ಈ ಸಂದರ್ಭದಲ್ಲಿ ಆಳಂದ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರು ಆದ ಸುಭಾಷ್ ಆರ್ ಗುತ್ತೇದಾರ, ಅಢಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ, ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಅಶೋಕರೆಡ್ಡಿ, ಪದವಿ ಕಾಲೇಜಿನ ಪ್ರಾಚಾರ್ಯ ಕಲ್ಯಾಣಿ ಸಾವಳಗಿ, ಪಿಯು ಕಾಲೇಜಿನ ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ, ಆಂಗ್ಲ್ ಮಾಧ್ಯಮ ಶಾಲೆಯ ಪ್ರಾಚಾರ್ಯೆ ಜ್ಯೋತಿ ವಿಶಾಖ, ಗೀತೆಗಳ ತರಬೇತುದಾರ ಶಂಕರ ಹೂಗಾರ ದೇಸಾಯಿ ಕಲ್ಲೂರ ಸೇರಿದಂತೆ ಬೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.