ನವೆಂಬರ್ ೦೧ ರಂದು ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಜನ್ಮದಿನ ಅದ್ದೂರಿಯಾಗಿ ಆಚರಣೆ

0
24

ಕಲಬುರಗಿ: ನವೆಂಬರ್ ೦೧ ರಂದು ಕಲಬುರಗಿ ಜಿಲ್ಲಾ ವೀರಶೈವ ಸಮಾಜದ ವತಿಯಿಂದ ಶರಣಬಸವೇಶ್ವರ ಸಂಸ್ಥಾನದ ೯ನೇ ಮಹಾದಾಸೋಹ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಅವರ ೫ನೇ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಶ್ರೀ ಮುರುಗೇಶ್ ನಿರಾಣಿ ಅವರು ಉದ್ಘಾಟಿಸಲಿದ್ದಾರೆ.

ಇದೇ ಪ್ರಥಮ ಬಾರಿಗೆ ಜಿಲ್ಲಾ ವೀರಶೈವ ಸಮಾಜವು ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಅವರ ಜನ್ಮದಿನಾಚರಣೆ ನಿಮಿತ್ಯ ವಿವಿಧ ವೀರಶೈವ ಮಠಾಧೀಶರಿಗೆ ಹಾಗೂ ಹಿರಿಯ ರಾಜಕೀಯ ಮುಖಂಡರನ್ನು ಆಹ್ವಾನಿಸಿ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಮುಂದಾಗಿದೆ.

Contact Your\'s Advertisement; 9902492681

ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿಗಳಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್‌ರಾದ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅವರ ಸಾನಿಧ್ಯದಲ್ಲಿ ನಿರಾಣಿ ಅವರು ಜನ್ಮದಿನಾಚರಣೆಯನ್ನು ಉದ್ಘಾಟಿಸುವರು. ಈ ಸಂಧರ್ಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಉಪಸ್ಥಿತರಿರುವರು.

ಆಂಧ್ರಪ್ರದೇಶದ ಶ್ರೀಶೈಲಂನ ಪೂಜ್ಯ ಜಗದ್ಗುರು ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಬೀದರ ಜಿಲ್ಲೆಯ ಭಾಲ್ಕಿಯ ಹಿರೇಮಠದ ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರು, ಬೀದರ ಜಿಲ್ಲೆಯ ಹಾರಕೂಡ ಸಂಸ್ಥಾನದ ಪೂಜ್ಯ ಡಾ.ಚೆನ್ನವೀರ ಶಿವಾಚಾರ್ಯರು, ಚೌಡಾಪುರಿ ಮಠದ ಪೂಜ್ಯ ಡಾ. ರಾಜಶೇಖರ ಶಿವಾಚಾರ್ಯರು, ಸೇಡಂನ ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಪೂಜ್ಯ ಶ್ರೀ ಸದಾಶಿವ ಸ್ವಾಮಿಗಳು ಸೇರಿದಂತೆ ವಿವಿಧ ಧಾರ್ಮಿಕ ಮಠಾಧೀಶರು ನೇತೃತ್ವ ವಹಿಸಲಿದ್ದಾರೆ.

ಜನ್ಮದಿನಾಚರಣೆಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ  ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ರಾಜಕುಮಾರ ಪಾಟೀಲ ತೇಲ್ಕೂರ, ಶಾಸಕರಾದಶರಣಬಸಪ್ಪಗೌಡ ದರ್ಶನಾಪುರ, ಎಂ.ವೈ.ಪಾಟೀಲ್, ಖನಿಜಾ ಫಾತಿಮಾ, ಡಾ.ಅಜಯಸಿಂಗ್,  ಬಸವರಾಜ ಮತ್ತಿಮೂಡ,  ಅವಿನಾಶ ಜಾಧವ್, ಎಂ.ಎಲ್.ಸಿ. ಬಿ.ಜಿ.ಪಾಟೀಲ,  ಶಶೀಲ್ ಜಿ. ನಮೋಶಿ, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಬಿಲಗುಂದಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಚೇರಮನ್‌ರಾದ ಚಂದು ಪಾಟೀಲ ಮತ್ತು ಇತರರು ಸೇರಿದಂತೆ ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ. ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷರಾದ ಶ್ರೀ ಅರುಣಕುಮಾರ ಪಾಟೀಲ ಕೊಡಲಹಂಗರಗಾ ಅವರು ಜನ್ಮದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಈ ಸಮಾರಂಭದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಹಾಗೂ ಗೋದುತಾಯಿ ಪದವಿ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ನೀಲಾಂಬಿಕಾ ಶೇರಿಕಾರ ವಿಶೇ? ಉಪನ್ಯಾಸ ನೀಡಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here