ಕಲಬುರಗಿ: ನಗರದ ಸರದಾರ ವಲ್ಲಭಭಾಯಿ ಪಟೇಲ ವೃತ್ತದಲ್ಲಿ ಜೈಕನ್ನಡಿಗರ ಸೇನೆಯ ವತಿಯಿಂದ ಇಂದು ಬೆಳಿಗ್ಗೆ ೧೦-೩೦ಕ್ಕೆ ತಾಯಿ ಭುವನೇಶ್ವರಿ ದೇವಿಗೆ ಪೂಜೆ ಮತ್ತು ನಮನ ಸಲ್ಲಿಸುವ ಮೂಲಕ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಎಚ್.ಭಾಸಗಿ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಸಾನಿಧ್ಯ ವಹಿಸಲಿರುವ ಜೈಭಾರತ ಮಾತಾ ಸೇವಾ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷರಾದ ಪೂಜ್ಯ ಹವಾಶ್ರೀ ಮಲ್ಲಿನಾಥ ಸ್ವಾಮೀಜಿ ಅವರು ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ
ದತ್ತಾತ್ರೇಯ ಸಿ.ಪಾಟೀಲ ರೇವೂರ, ನಗರ ಪೊಲೀಸ ಆಯುಕ್ತರಾದ ರವಿಕುಮಾರ, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ, ಕಾಂಗ್ರೆಸ್
ಮುಖಂಡರಾದ ನೀಲಕಂಠರಾವ ಮೂಲಗೆ, ಡಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲತಾ ರವಿ ರಾಠೋಡ, ಮಹಾನಗರ ಪಾಲಿಕೆ ಸದಸ್ಯರಾದ
ವಿಶಾಲ ದರ್ಗಿ, ಹೋರಾಟಗಾರ ಲಕ್ಷ್ಮಣ ದಸ್ತಿ, ಬೀಬಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಅವರು ಆಗಮಿಸಲಿದ್ದಾರೆ ಎಂದು ಭಾಸಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.