ಕಲಬುರಗಿ: ಮಂಗಳವಾರದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರಿಂಕೋರ್ಟ್ ವಿಧಾನಸಭಾಧ್ಯಕ್ಷರಿಗೆ ಆದೇಶ ನೀಡಿದೆ. ಅತೃಪ್ತರ ಕುರಿತು ವಿಧಾನಸಭಾಧ್ಯಕ್ಷರ ನಿರ್ಧಾರ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಡಾ. ಮಲ್ಲಿಕಾರ್ಜುನ್ ಖರ್ಗೆಯವರು ಹೇಳಿದ್ದಾರೆ.
ಬೆಂಗಳೂರಿನ ಕುಮಾರಕೃಪಾ ಗೆಸ್ಟ್ ಹೌಸ್‌ನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತೃಪ್ತರು ಸಹಜವಾಗಿಯೇ ಅನರ್ಹತೆ ಆಗಲಿ. ರಾಜೀನಾಮೆ ಅಂಗೀಕಾರ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎಂದರು.
ಆದಾಘ್ಯೂ, ಈಗಾಗಲೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸದನದಲ್ಲಿ ವಿಶ್ವಾಸಮತ ಕೇಳುವುದಾಗಿ ಹೇಳಿದ್ದಾರೆ. ಈ ಕುರಿತು ವಿಧಾನಸಭಾಧ್ಯಕ್ಷರಿಗೂ ಸಮಯ ನಿಗದಿ ಮಾಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಧಾನಸಭಾಧ್ಯಕ್ಷರು ನಿರ್ಣಯ ಕೈಗೊಂಡ ಬಳಿಕ ಮುಂದೇನು ಮಾಡಬೇಕು ಎಂಬುದರ ಕುರಿತು ಗೊತ್ತಾಗಲಿದೆ ಎಂದು ಅವರು ಹೇಳಿದರು.