ಬಾಗಲಕೋಟ: ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಲ್ಪಸಂಖ್ಯಾತರ ಘಟಕದಿಂದ ಪೂರ್ವಭಾವಿ ಸಭೆ ಕರೆಯಲಾಗಿತ್ತು. ನೂತನವಾಗಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಜಬ್ಬರ್ ಖಾನ್ ಅವರ ಬೆಂಗಳೂರಿನಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ಚರ್ಚಿಸಲಾಯಿತು.
ಬೆಂಗಳೂರಿನಿಂದ ಆಗಮಿಸಿದ ಕೆಪಿಸಿಸಿ ಅಲ್ಪಸಂಖ್ಯಾತರ ಮುಖಂಡರು ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಪದಗ್ರಹಣ ಸಮಾರಂಭಕ್ಕೆ ಬಾಗಲಕೋಟ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತರ ಮುಖಂಡರು ಹಾಗೂ ಕಾರ್ಯಕರ್ತರು ಅವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ಅಬುಶಾಮ ಕಾಜಿ,ಮಾಜಿ ಜಿಲ್ಲಾ ಅಧ್ಯಕ್ಷ ಎಂಬಿ ಸೌದಾಗರ್, ಕಾಂಗ್ರೆಸ್ ಮುಖಂಡ ಅಯ್ಯೋಬ ಪುಣೇಕರ್,ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ರಾಜು ಎಸ್ ಮನ್ನಿಕೇರಿ, ಬಾಗಲಕೋಟ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ತೋಹಿದ್ ಅಲಿ ಸಂತಿ ಶಿರೂರು,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬ್ಬಿರಹಮ್ಮದ್ ನದಾಫ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಜಿ ದಂಡಿನ್ ರಜಾಕ್,ಬೇನುರು ರಿಯಾಜ್, ಆರ್ ಡಿ ಬಾಬು,ಇನ್ನೂ ಅನೇಕರು ಭಾಗಿಯಾಗಿದ್ದರು.