ಶರಣಬಸವೇಶ್ವರ ಸಂಸ್ಥಾನ ಕೊಡುಗೆ ಅಪಾರ: ಗೋದುತಾಯಿ ಕಾಲೇಜಿನಲ್ಲಿ ಪೂಜ್ಯ ಡಾ.ಅಪ್ಪಾ ಅವರ ಜನ್ಮದಿನೋತ್ಸವ

0
15

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗವು ಶೈಕ್ಷಣಿಕವಾಗಿ ಹೆಮ್ಮರವಾಗಿ ಬೆಳೆಯಲು ಶರಣಬಸವೇಶ್ವರ ಸಂಸ್ಥಾನದ ಕೊಡುಗೆ ಅಪಾರವಾಗಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಮನ್ ಮತ್ತು ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಹೇಳಿದರು.

ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಬುಧವಾರ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರ ೮೭ನೆಯ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶರಣಬಸವೇಶ್ವರ ಸಂಸ್ಥಾನದಲ್ಲಿ ಕಲಿತ ವಿದ್ಯಾರ್ಥಿಗಳು ಜಗತ್ತಿನಾದ್ಯಂತ ಉನ್ನತ ಸ್ಥಾನದಲ್ಲಿದ್ದಾರೆ. ಶೈಕ್ಷಣಿಕವಾಗಿ ಅನೇಕ ಶಾಲಾ ಕಾಲೇಜುಗಳನ್ನು ಆರಂಭಿಸಿ ಜ್ಞಾನಲೋಕದ ಸ್ವರ್ಗ ಮಾಡಿದ್ದಾರೆ. ಹಿಂದುಳಿದ ಭಾಗವೆಂಬ ಹಣೆಪಟ್ಟಿಯನ್ನು ಅಳಿಸಿ ಶಿಕ್ಷಣ ಕೇಂದ್ರವನ್ನಾಗಿಸಿದ ಕೀರ್ತಿ ಅಪ್ಪಾಜಿಯವರಿಗೆ ಸಲ್ಲುತ್ತದೆ. ಕೆಜಿ ಯಿಂದ ಪಿಜಿಯವರಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಪೂಜ್ಯ ಅಪ್ಪಾಜಿಯವರು ಶೈಕ್ಷಣಿಕ ಅಲ್ಲದೆ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕವಾಗಿ ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.

Contact Your\'s Advertisement; 9902492681

ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಬಸವ ಸಮಿತಿಯ ಅಧ್ಯಕ್ಷೆ ಡಾ.ವಿಲಾಸವತಿ ಖೂಬಾ ಅವರು ಮಾತನಾಡಿ, ಶರಣಬಸವೇಶ್ವರ ಸಂಸ್ಥಾನ ಕಾಯಕ, ದಾಸೋಹಕ್ಕೆ ಹೆಸರುವಾಸಿಯಾಗಿದೆ. ಪೂಜ್ಯ ಡಾ.ಅಪ್ಪಾಜಿಯವರ ಕೊಡುಗೆ ಅಪಾರವಾಗಿದೆ ಅದರಂತೆ ಪೂಜ್ಯ ಡಾ.ದಾಕ್ಷಾಯಣಿ ಅವ್ವ ಅವರು ದಾಸೋಹ ಪರಂಪರೆಯನ್ನು ಮುನ್ನಡೆಸುತ್ತ ಸಂಸ್ಥೆಯನ್ನು ಬೆಳೆಸುತ್ತಿದ್ದಾರೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಮಾತನಾಡಿ, ಪೂಜ್ಯ ಅಪ್ಪಾ ಅವರು ಶರಣಬಸವೇಶ್ವರ ಪ್ರತಿರೂಪವಾಗಿದ್ದಾರೆ. ನಾಡಿಗೆ ಬಹು ದೊಡ್ಡ ಕೊಡುಗೆ ನೀಡುತ್ತಿದ್ದಾರೆ ಎಂದರು.

ಕೇಂದ್ರಿಯ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ವಿಭಾಗದ ನಿರ್ದೇಶಕರಾದ ಡಾ.ಬಿ.ವಿ.ಪೂಜಾರ ಅವರು ಆಶಯ ನುಡಿಗಳನ್ನಾಡಿದರು, ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಪುಟ್ಟಮಣಿ ದೇವಿದಾಸ ಸ್ವಾಗತಿ, ಪ್ರಾಸ್ತಾವಿಕ ಮಾತನಾಡಿದರು. ಸಂಗೀತ ವಿಭಾಗದ ಮುಖ್ಯಸ್ಥೆ ಡಾ.ಸೀಮಾ ಪಾಟೀಲ ನಿರೂಪಿಸಿದರು, ಡಾ.ಸಿದ್ದಮ್ಮ ಗುಡೇದ್, ಶ್ರೀಮತಿ ಜಾನಕಿ ಹೊಸೂರ, ಕೃಪಾಸಾಗರ ಗೊಬ್ಬುರ, ಶ್ರೀಮತಿ ಪದ್ಮಜಾ ವೀರಶೆಟ್ಟಿ ಅತಿಥಿ ಪರಿಚಯ ಮಾಡಿದರು. ವೀರಭದ್ರಯ್ಯ ಸ್ಥಾವರಮಠ ವಂದಿಸಿದರು.

ಬೇರೆ ಬೇರೆ ಮಹಾವಿದ್ಯಾಲಯದಿಂದ ಅನೇಕ ಪ್ರಾಧ್ಯಾಪಕರು, ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ ಮಹಾದಾಸೋಹ ಸೂತ್ರಗಳು, ಕನ್ನಡ ಭಾಷೆ ಮತ್ತು ಸಾಹಿತ್ಯ ಹಾಗೂ ಡಾ.ಶರಣಬಸವಪ್ಪ ಅಪ್ಪ ಗೋಷ್ಠಿಗಳು ನಡೆದವು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here