ಧರ್ಮಸ್ಥಳ ಮಂಜುನಾಥ ಫೈನಾನ್ಸ್ ಮಹಿಳೆಯರ ಸ್ವಾವಲಂಬನೆ ಬದುಕಿಗೆ ಸ್ಫೂರ್ತಿ: ದಿನೇಶ್.ಎ

0
144

ಶಹಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ಧಿ ಸಂಸ್ಥೆಯು ಗ್ರಾಮೀಣ ಮಹಿಳೆಯರ ಸ್ವಾವಲಂಬನೆ ಬದುಕಿಗೆ ಸ್ಫೂರ್ತಿದಾಯಕವಾಗಿದೆ ಎಂದು ಜಿಲ್ಲಾ ನಿರ್ದೇಶಕರಾದ ದಿನೇಶ್ ಎ. ಹೇಳಿದರು.

ಶಹಾಪುರ ತಾಲೂಕಿನ ಸಗರ ಗ್ರಾಮದ ಶ್ರೀ ಮೌನೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಹೈದರಾಬಾದ್ ಕರ್ನಾಟಕದಲ್ಲಿ ನಮ್ಮ ಸಂಸ್ಥೆಯ 3 ವರ್ಷಗಳಿಂದ ಕಾರ್ಯನಿರ್ವಹಿಸುತ್ತ ಬಂದಿದ್ದು ಇಲ್ಲಿಯ ಜನರ ರೆಸ್ಪಾನ್ಸ್ ತುಂಬಾ ಚೆನ್ನಾಗಿದೆ ಎಂದು ಜಿಲ್ಲಾ ಯೋಜನಾಧಿಕಾರಿಗಳಾದ ಶ್ರೀಧರ್ ಟಿ.ಎನ್. ಹೇಳಿದರು.

ನನ್ನ ಮಗನಿಗೆ ಮೆಡಿಕಲ್ ಸೀಟು ಸಿಕ್ಕಾಗ ನಮಗೆ ಆರ್ಥಿಕ ಪರಿಸ್ಥಿತಿ ತುಂಬಾ ಗಂಭೀರವಾಗಿತ್ತು ಆವಾಗ ಧರ್ಮಸ್ಥಳ ಶ್ರೀ ಮಂಜುನಾಥ ಫೈನಾನ್ಸ್ ದವರು ಸಾಲ ನೀಡಿ ನಮಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಮಕ್ಕಳ ಶಿಕ್ಷಣಕ್ಕೆ ಸಾಲ ಪಡೆದ ಫಲಾನುಭವಿಗಳಾದ ಪಾರ್ವತಿ ಹೇಳಿದರು.

ನಮ್ಮ ಕುಟುಂಬ ಬಡತನದಲ್ಲಿದ್ದಾಗ ಏನು ಮಾಡಬೇಕೆಂಬ ದೋಚದೆ ಇದ್ದಂತಹ ಸಮಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಬ್ಯಾಂಕ್ನ ವತಿಯಿಂದ ಸಾಲ ಪಡೆದು ರೊಟ್ಟಿ ಕೇಂದ್ರ ಸ್ಥಾಪಿಸಿ ದಿನಾಲು 300 – 400 ನೂರು ರೊಟ್ಟಿಗಳು ಮಾರಾಟ ಮಾಡಿ ಬಂದ ಹಣದಲ್ಲಿ ನೆಮ್ಮದಿಯ ಬದುಕು ಸಾಗಿಸುತ್ತಿದ್ದೇವೆ ಎಂದು ಹುಲಿಗೆಮ್ಮ ಹೇಳಿದಳು.

ನಾನು ಕೂಡ ಶ್ರೀ ಧರ್ಮಸ್ಥಳ ಮಂಜುನಾಥ ಬ್ಯಾಂಕಿನಲ್ಲಿ ಸಾಲ ಪಡೆದು ಹೊಲಿಗೆ ಯಂತ್ರವನ್ನು ಖರೀದಿಸಿ ಅದರಲ್ಲಿ ಸಾಕಷ್ಟು ಲಾಭವನ್ನು ಕಂಡಿದ್ದೇನೆ ಎಂದು ಫಲಾನುಭವಿಗಳಾದ ಶಶಿಕಲಾ ಅವರು ಹೇಳಿದರು.

ಈ ಸಮಾರಂಭದ ವೇದಿಕೆಯ ಮೇಲೆ ಮೇಲ್ವಿಚಾರಕರಾದ ಅನ್ನಪೂರ್ಣ ಸಿಬ್ಬಂದಿಗಳಾದ ಶಿಲ್ಪಾ ಪಾಟೀಲ್ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ ಸಂಘಗಳ ಮುಖ್ಯಸ್ಥರು ಹಾಗೂ ಫಲಾನುಭವಿಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here