ಕಲಬುರಗಿ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ( ಮಾರ್ಕ್ಸ್ ವಾದಿ) ಸಂಘಟನೆ ಜಿಲ್ಲಾ ಕಾರ್ಯದರ್ಶಿಯಾಗಿ ಸಾಹಿತಿ ಹೋರಾಟಗಾರ್ತಿ ನೀಲಾ ಕೆ ಅವರು ಆಯ್ಕೆಯಾಗಿದ್ದಾರೆ.
ನೀಲಾ ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆ ನಾಯಕಿ ಮತ್ತು ಸಾಹಿತಿಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ನರೇಗಾ ಯೋಜನೆ ವಿವಿಧ ಗ್ರಾಮದಲ್ಲಿ ಸೂಕ್ತ ರೀತಿಯಲ್ಲಿ ಜಾರಿಗೆ ನಿರಂತರ ಹೋರಾಟದಲ್ಲಿ ತೊಡಗಿದ್ದು, ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.