ಶಹಾಬಾದ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತು ಜನರು ಇಂದು ಕಾಂಗ್ರೆಸ್ ಪಕ್ಷದ ಕಡೆಗೆ ಒಲುವು ತೋರಿದ್ದು, ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಶಿವಾನಂದ ಪಾಟೀಲ ಮರತೂರ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಹೇಳಿದರು.
ಅವರು ಬುಧವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆಯ ನಿಮಿತ್ತ ಆಯೋಜಿಸಲಾz ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಸರಿಯಾಗಿ ಕೆಲಸ ನಿರ್ವಹಿಸಿಲ್ಲ. ಕೋವಿಡ್ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರಗಳು ವಿಫಲವಾಗಿವೆ. ರೈತರ ಹಿತ ಕಾಪಾಡುವಲ್ಲಿ ದುರಾಡಳಿತ ತೋರಿದೆ.ಬಿಜೆಪಿ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದಾರೆ.ಪೆಟ್ರೋಲ್, ಡಿಸೇಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಸುಳ್ಳು ಆಶ್ವಾಸನೆ ನೀಡಿ ಜನರನ್ನು ಕಷ್ಟಕ್ಕೆ ನೂಕಿದ ಪ್ರಧಾನಿ ಮೋದಿ ಸೇರಿದಂತೆ ಇಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತೆವೆ.
ಆದ್ದರಿಂದ ಈ ಬಾರಿ ಮತದಾರರು ಕಾಂಗ್ರೆಸ್ ಪರವಾಗಿ ಮತ ಹಾಕಲಿದ್ದು, ಗೆಲುವು ನಮ್ಮದಾಗುತ್ತದೆ. ಬಿ.ಜಿ.ಪಾಟೀಲ ಅವರು ಕಳೆದ ಬಾರಿ ಗೆಲುವು ಕಂಡರೂ ಯಾವುದೇ ಅಭಿವೃದ್ಧಿ ಮಾಡಿಲ್ಲ.ಅಲ್ಲದೇ ಒಂದು ಬಾರಿಯೂ ಗ್ರಾಪಂಗೆ ಬೇಟಿ ನೀಡಿಲ್ಲ ಎಂಬುದು ಬಿಜೆಪಿ ಮುಖಂಡರೇ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ ಅವರನ್ನು ಕಣಕ್ಕಿಳಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಈ ನಿಟ್ಟಿನಲ್ಲಿ ಅವರಿಗೆ ಟಿಕೆಟ್ ನೀಡಲಾಗಿದೆ. ಈಗಾಗಲೇ ಕೆಲ ಭಾಗಗಳಲ್ಲಿ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸುವಂತೆ ಕೋರಲಾಗಿದೆ.ಎಲ್ಲ ಕಡೆಯಲ್ಲೂ ಉತ್ತಮ ಬೆಂಬಲ ದೊರಕಿದೆ ನಮ್ಮ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ ಮರ್ಚಂಟ್ ಮಾತನಾಡಿ,ಈ ಹಿಂದೆ ಮತದಾನ ಕೇವಲ ಉಳ್ಳವರ ಹಕ್ಕಾಗಿತ್ತು. ರಾಜೀವ್ ಗಾಂಧಿ ಪ್ರಧಾನ ಮಂತ್ರಿಯಾದ ಸಂದರ್ಭದಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲಾ ವರ್ಗದ ಎಲ್ಲಾ ವರ್ಗದ ಜನರಿಗೆ ಮತದಾನದ ಹಕ್ಕನ್ನು ನೀಡಿದ್ದು ಕಾಂಗ್ರೆಸ್ ಪಕ್ಷ. ಅಲ್ಲದೆ ಎಲ್ಲಾ ವರ್ಗಕ್ಕೂ ಒಳಿತನ್ನು ಮಾಡಿದ ಪಕ್ಷ ಅದುವೇ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.
ಮುಖಂಡರಾದ ಪೀರಪಾಶಾ ಹಾಗೂ ಮೃತ್ಯುಂಜಯ್ ಹಿರೇಮಠ ಮಾತನಾಡಿ, ದೇಶದಲ್ಲಿ ಎಪ್ಪತ್ತು ವ? ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಏನು ಮಾಡಿಲ್ಲ ಎನ್ನುವ ಬಿಜೆಪಿ ಅವರಿಗೆ ನಮ್ಮ ಕಾಂಗ್ರೆಸ್ ಪಕ್ಷದ ಹೆಜ್ಜೆಗುರುತುಗಳನ್ನು ಒಮ್ಮೆ ಹಿಂತಿರುಗಿ ನೋಡಬೇಕಾಗಿದೆ. ಅವರಿಗೆ ನಾವು, ನಮ್ಮ ಪಕ್ಷ ಮಾಡಿದ ಕೆಲಸಗಳನ್ನು ಮನವರಿಕೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಹೆಜ್ಜೆ ಇಡಬೇಕಾಗಿದೆ ಎಂದರು.ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಆಡಳಿತದಲ್ಲಿ ಚುನಾವಣೆಯ ಪ್ರಣಾಳಿಕೆಯಲ್ಲಿ ಹೇಳಿದಂತೆ ನೂರಾ ಅರವತ್ತೈದು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅವೆಲ್ಲವೂ ಜನಮನ್ನಣೆ ಕಾರ್ಯಕ್ರಮಗಳಾಗಿದ್ದವು ಎಲ್ಲಾ ವರ್ಗಕ್ಕೂ ಬೇಕಾದ ಕಾರ್ಯಕ್ರಮ ಆಗಿದ್ದವು ಎಂದರು.
ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿಜಯಕುಮಾರ ಮುತ್ತಟ್ಟಿ, ಕಾರ್ಯದರ್ಶಿ ಮೃತುಂಜಯ ಹಿರೇಮಠ, ಸುರೇಶ ನಾಯ್ಕ, ಶರಣಗೌಡ ಪಾಟೀಲ ಗೋಳಾ, ಪೀರ್ ಪಾಶಾ, ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬನೂರ, ಮಾಜಿ ನಗರಸಭೆಯ ಅಧ್ಯಕ್ಷರಾದ ಗಿರೀಶ ಕಂಬನೂರ, ಯಾಕೂಬ ಮಚಂಟ್ ಸೇರಿದಂತೆ ನಗರಸಭೆಯ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.