ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ೭೦ ವರ್ಷದ ವೃದ್ಧನನ್ನು ಅಫಜಲಪುರ ತಾಲ್ಲೂಕಿನ ರೇವೂರ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಅಫಜಲಪುರ ತಾಲ್ಲೂಕಿನ ರೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮ ಒಂದರಲ್ಲಿ ಘಟನೆ ಜರುಗಿರುವ ಆರೋಪ ಕೇಳಿಬಂದಿದ್ದು, ವೃದ್ಧ ಮತ್ತು ಅತ್ಯಾಚಾರಕ್ಕೆ ಒಳಗಾದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ನ.29 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಪಕ್ಕದ ಮನೆಯ ೭೦ ವರ್ಷದ ವೃದ್ಧ ಮಿರ್ಚಿ ಭಜಿ ಕೊಡಿಸುವುದಾಗಿ ಆಮಿಷ ಒಡ್ಡಿ 13 ವರ್ಷದ ಬಾಲಕಿಮ ಮೇಲೆ ಅತ್ಯಾಚಾರ ವೆಸಗಿದ್ದಾರೆ ಎಂದು ಕೇಳಿಬಂದಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಂದು ವೃದ್ಧನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.