ಪಂಚಭೂತಗಳಲ್ಲಿ ಲೀನವಾದ 84 ವರ್ಷದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ‘ಶಿವರಾಂ’ರವರೂ..! —

0
23
  • ಕುಶಲ

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು ಶಿವರಾಂರು. ಇತ್ತೀಚೆಗಷ್ಟೇ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

‘ನಮ್ಮ ತಂದೆ ಶಿವರಾಂರವರು ಇನ್ನು ನಮ್ಮ ಜತೆ ಇಲ್ಲ. ಶಿವರಾಮ್​ರವರು ಭಗವಂತನ ಪಾದ ಸೇರಿದ್ದಾರೆ. ಆಸ್ಪತ್ರೆ ವತಿಯಿಂದ ಎಲ್ಲಾ ರೀತಿ ಚಿಕಿತ್ಸೆ ನೀಡಿದ್ದಾರೆ. ಆದರೆ ಶಿವರಾಮ್​ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಅವರ ಮಗನಾದ ಲಕ್ಷ್ಮೀಶ್​ ಹೇಳಿದರು.

Contact Your\'s Advertisement; 9902492681

1938 ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಎಸ್.ಶಿವರಾಂ, 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದರು. ಚಿತ್ರರಂಗದಲ್ಲಿ ಅವರು ಶಿವರಾಮಣ್ಣ ಎಂದೇ ಎಲ್ಲರಿಗೂ ಪರಿಚಿತರಾಗಿದ್ದವರು. ಪೋಷಕ ನಟನಾಗಿ, ಹಾಸ್ಯನಟನಾಗಿ ನಟಿಸಿದ್ದ ಶಿವರಾಂ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದವರು. ಸೋದರ ರಾಮನಾಥನ್ ಜತೆ ಸೇರಿ ‘ರಾಶಿ ಬ್ರದರ್ಸ್‌’ ಸಿನಿಮಾ ಸಂಸ್ಥೆ ಸ್ಥಾಪಿಸಿ ಹಲವು ಚಿತ್ರ ನಿರ್ಮಿಸಿದ್ದರು. ಚಿತ್ರರಂಗದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಜತೆಯೂ ಶಿವರಾಂ ಕೆಲಸ ಮಾಡಿದ್ದವರು. ಹಲವು ದಿಗ್ಗಜ ನಟರೊಂದಿಗೆ ಶಿವರಾಂ ತೆರೆ ಹಂಚಿಕೊಂಡಿದ್ದವರು.

ಬೆರೆತ ಜೀವ (1965), ಮಾವನ ಮಗಳು (1965), ದುಡ್ಡೇ ದೊಡ್ಡಪ್ಪ (1966), ಲಗ್ನಪತ್ರಿಕೆ (1967),  ಶರಪಂಜರ (1971), ಮುಕ್ತಿ(1971), ಭಲೇ ಅದೃಷ್ಟವೋ ಅದೃಷ್ಟ(1971), ಸಿಪಾಯಿ ರಾಮು (1972), ನಾಗರಹಾವು(1972), ನಾ ಮೆಚ್ಚಿದ ಹುಡುಗ (1972), ಹೃದಯಸಂಗಮ (1972), ಕಿಲಾಡಿ ಕಿಟ್ಟು (1978), ನಾನೊಬ್ಬ ಕಳ್ಳ (1979), ಹಾಲುಜೇನು (1982), ಪಲ್ಲವಿ ಅನುಪಲ್ಲವಿ (1983), ಭಜರಂಗಿ (2013), ಬಂಗಾರ s/o ಬಂಗಾರದ ಮನುಷ್ಯ (2017) ಮೊದಲಾದ ಸಿನಿಮಾಗಳಲ್ಲಿ ಶಿವರಾಂ ನಟಿಸಿದ್ದವರು. ಮಕ್ಕಳ ಸೈನ್ಯ ಸೇರಿದಂತೆ ಅನೇಕ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದವರು. 1980 ರಲ್ಲಿ ‘ಡ್ರೈವರ್ ಹನುಮಂತು’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದವರು ಶಿವರಾಂರವರು..!

ಇಂತಹ ಶಿವರಾಂ ಈಗ ನಮ್ಮನ್ನು ಅಗಲಿದ್ದಾರೆ. # ತಮ್ಮನನ್ನು ಕಳೆದುಕೊಂಡು ತಿಂಗಳಾಗಿತ್ತೂ..! ಮತ್ತೆ ಈಗ ಶಿವರಾಂರೂ ಅಗಲಿದ್ದಾರೆಯೂ.!!– ಡಾ. ರಾಜ್​ಕುಮಾರ್ ಕುಟುಂಬ​ದ ಜೊತೆಗೆ ಶಿವರಾಂ ಅವರಿಗೆ ಆಪ್ತ ಒಡನಾಟವಿತ್ತು.

ನಟ ಶಿವರಾಜ್​ಕುಮಾರ್ ಅವರು ಕಳೆದ ಕೆಲವು ದಿನಗಳಿಂದ ತೀವ್ರ ನೋವಿನಲ್ಲಿದ್ದರು. ಪುನೀತ್​ ರಾಜ್​ಕುಮಾರ್​ ಅವರ ನಿಧನದಿಂದ ಇಡೀ ರಾಜ್​ ಕುಟುಂಬ ಕಣ್ಣೀರು ಸುರಿಸುತ್ತಿದೆ. ಅಪ್ಪು ಇಹಲೋಕ ತ್ಯಜಿಸಿ ಒಂದು ತಿಂಗಳು ಕಳೆದಿದೆ ಅಷ್ಟೇ. ಅಷ್ಟರೊಳಗೆ ಮತ್ತೊಂದು ಕಹಿ ಸುದ್ದಿ ಕೇಳಿಬಂದಿದೆ. ಡಾ.ರಾಜ್ ಕುಮಾರ್​ ಕುಟುಂಬಕ್ಕೆ ತುಂಬ ಆಪ್ತರಾಗಿದ್ದ ಹಿರಿಯ ನಟ ಶಿವರಾಂ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವುದು ಶಿವರಾಜ್​ಕುಮಾರ್​ ಅವರಿಗೆ ನೋವುಂಟು ಮಾಡಿತ್ತು. ಬೆಂಗಳೂರಿನ ಬ್ಯಾಂಕ್​ ಕಾಲೋನಿಯ ಖಾಸಗಿ ಆಸ್ಪತ್ರೆಯಲ್ಲಿ ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಶಿವಣ್ಣ ಕೆಲವು ಮಾತುಗಳನ್ನು ಹಂಚಿಕೊಂಡಿದ್ದರು. ಶಿವರಾಂ ಅವರು ಬೇಗ ಗುಣಮುಖರಾಗಲಿ ಎಂದೂ ಪ್ರಾರ್ಥಿಸಿದ್ದರು.

ಡಾ. ರಾಜ್​ಕುಮಾರ್ ಕುಟುಂಬ​ದ ಜೊತೆಗೆ ಶಿವರಾಂ ಅವರಿಗೆ ಆಪ್ತ ಒಡನಾಟ ಇತ್ತು. ಆ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ‘ಅವರ ಫ್ಯಾಮಿಲಿಗೆ ಧೈರ್ಯ ಹೇಳುತ್ತೇನೆ. ನಾನೂ ಕೂಡ ಅವರ ಕುಟುಂಬದ ಸದಸ್ಯ ಆಗಿರುವುದರಿಂದ ನಮಗೂ ಎಲ್ಲರೂ ಧೈರ್ಯ ಹೇಳಬೇಕು. ಒಂದು ತಿಂಗಳ ಹಿಂದಷ್ಟೇ ತಮ್ಮನನ್ನು ಕಳೆದುಕೊಂಡಿದ್ದೇನೆ. ದೇವರು ಪದೇಪದೇ ಯಾಕೆ ಈ ರೀತಿ ನೋವು ಕೊಡುತ್ತಾನೆ ಅಂತ ನಮಗೂ ಅರ್ಥ ಆಗುವುದಿಲ್ಲ’ ಎಂದೂ ಶಿವಣ್ಣ ಕಂಬನಿ ಮಿಡಿದಿದ್ದಾರೆ.

ಶಿವರಾಜ್​ಕುಮಾರ್​ ಮತ್ತು ಶಿವರಾಂ ಅವರು ಅನೇಕ ಬಾರಿ ಒಟ್ಟಾಗಿ ಶಬರಿಮಲೆಗೆ ಹೋಗಿ ಬಂದಿದ್ದುಂಟು. ಅದನ್ನು ಶಿವಣ್ಣ ಮೆಲುಕು ಹಾಕಿದ್ದಾರೆಷ್ಟೇಯಲ್ಲ, ‘ಒಂದು ವರ್ಷದಲ್ಲಿ ಮೂರು-ನಾಲ್ಕು ಬಾರಿ ಶಿವರಾಂ ಅವರು ಶಬರಿಮಲೆ ಅಪ್ಪಯ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗುತ್ತಾರೆ. ನಮ್ಮ ಜೊತೆಯೂ ಹೋಗಿ ಬರುತ್ತಿದ್ದರು ಶಿವರಾಂ ಅವರು. ಸ್ನೇಹಿತರು ಯಾರಾದರೂ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿದಾಗಲೂ ಹೋಗುತ್ತಾರೆ. ಅಯ್ಯಪ್ಪ ಸ್ವಾಮಿ ಎಂದರೆ ಶಿವರಾಂ ಅವರಿಗೆ ಏನೋ ವಿಶೇಷ ಪ್ರೀತಿ ಇತ್ತು.

ಮೂರು ವರ್ಷದ ನಾವು ಹಿಂದೆ ಶಬರಿಮಲೆಗೆ ಹೋಗಿದ್ವಿ. ಕೋವಿಡ್​ ಬಂದ ನಂತರ ಹೋಗಲು ಸಾಧ್ಯವಾಗಿರಲಿಲ್ಲ. ಆಗ ಅವರಿಗೆ 81 ವರ್ಷ. ಆ ವಯಸ್ಸಿನಲ್ಲೂ ಅವರು ಬೆಟ್ಟ ಹತ್ತುತ್ತಿದ್ದರು. ಅವರಲ್ಲಿ ಇರುವ ಆ ಮನೋಬಲವೇ ಅವರನ್ನು ಕಾಪಾಡುತ್ತದೆ ಎಂದುಕೊಂಡಿದ್ದೇನೆ. ಆದರೆ ಈಗ ಆ ದೇವರು ಶಿವರಾಂರನ್ನು ಸೆಳೆದುಕೊಂಡಿದ್ದಾನೆ. ಎಂಬುದೇ ನಮ್ಮ ದುಃಖ. ಕರ್ನಾಟಕದ ಜನತೆಯ ಪ್ರೀತಿ-ಅಭಿಮಾನದಿಂದ ಅವರು ಗುಣಮುಖರಾಗುತ್ತಾರೆ’ ಎಂದು ಎಂದು ಅಭಿಮಾನಿಗಳು ನಂಬಿದ್ದರು. ಆದರೆ ಈಗ ಶಿವರಾಂ ಹೋಗಿದ್ದು ಅತ್ಯಂತ ದುಃಖಕರ ವಿಷಯವಾಗಿದೆ ಎಂದು ಶಿವರಾಂ ಆಪ್ತ ವಲಯದ ಶಿವರಾಜ್ ಕುಮಾರ್ ಅತ್ಯಂತ ದುಃಖದಿಂದ ಮಾತನಾಡಿದ್ದಾರೆ. ಇದು ಇಡೀ ಚಿತ್ರರಂಗದ ದುಃಖಕರ ವಿಷಯವಾಗಿದೆಯೂ..!

ಏನೇಯಾಗಲಿ ಶಿವರಾಂರವನ್ನು ಕಳೆದುಕೊಂಡ ಕಲಾಪೋಷಕರು ಮುಖ್ಯವಾಗಿ ಶಿವರಾಂರವರ ಕುಟುಂಬದ ಸದಸ್ಯರು ಈ ದುಃಖಕರ ವಿಷಯವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕೊಡಲಿ ಎಂದು ಇ-ಮೀಡಿಯಾಲೈನ್ ಸುದ್ದಿ ವಾಹಿನಿಯು ಬೇಡಿಕೊಳ್ಳುತ್ತಿದೆಯೂ..!

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here