ವಿಧಾನಪರಿಷತ್ ಚುನಾವಣೆ: ಬಾಯಿ ತಪ್ಪಿ ನರೇಂದ್ರ ಮೋದಿಯವರನ್ನು ಹೊಗಳಿದ ಸಿದ್ದರಾಮಯ್ಯ!

0
44
40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ?: ಮಾಜಿ ಸಿಎಂ ಸಿದ್ದರಾಮಯ್ಯ
  • ಕುಶಲ

ಬೆಳಗಾವಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಎಂದಿನಂತೆ ಬಿಜೆಪಿ ವಿರುದ್ಧ ಹರಿಹಾಯ್ದರು. ಈ ವೇಳೆ ಬಾಯಿ ತಪ್ಪಿ ಸಾಲಮನ್ನಾ ಮಾಡಿದ್ದು ನರೇಂದ್ರ ಮೋದಿ ಎಂದು ಹೇಳಿದರಾದರೂ, ತಕ್ಷಣವೇ ಅದನ್ನು ತಿದ್ದಿಕೊಂಡರು.

ಸಾಲಮನ್ನಾ ಮಾಡಿದ್ದು ಮನಮೋಹನ್ ಸಿಂಗ್ ಎಂದು ಹೇಳಿದರು. ಐದು ರಾಜ್ಯಗಳಲ್ಲಿ ಸೋತ ಬಳಿಕ ಕೃಷಿ ಕಾಯ್ದೆ ವಾಪಸ್ ಪಡೆಯಲಾಗಿದೆ ಎಂದು ಟೀಕಿಸಿದರು. ಕೃಷಿ ಕಾಯ್ದೆ ವಿರೋಧಿಸಿ ನಡೆದ ಹೋರಾಟದಲ್ಲಿ 700 ರೈತರು ಮೃತಪಟ್ಟರು. ಅವರ ಸಾವುಗಳಿಗೆ ನರೇಂದ್ರ ಮೋದಿ. ಅವರಿಗೆ ರೈತರ ಬಗ್ಗೆ ಕಾಳಜಿಯಾಗಲಿ, ಅವರ ಬಗ್ಗೆ ಮಾತನಾಡುವ ನೈತಿಕತೆಯಾಗಲಿ ಇಲ್ಲ. ನಾನು ಕೊಟ್ಟ ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್, ಶಾದಿ ಭಾಗ್ಯ ನಿಲ್ಲಿಸಿದ್ದಾರೆ ಎಂದೂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

2023 ರಲ್ಲಿ ನಮ್ಮ ಪಕ್ಷ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುತ್ತೆ. ಅದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ. ರಾಜ್ಯದ ಜನ ಈ ಸರ್ಕಾರ ಯಾವಾಗ ತೊಲಗುತ್ತೋ ಎಂದು ಶಾಪ ಹಾಕುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಈ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳನ್ನು ಕಾಣಬೇಕಾಯಿತು. ಅಧಿಕಾರಕ್ಕೆ ಬಂದ ನಂತರ ಇವರು ಒಂದೇ ಒಂದು ಕೆಲಸವನ್ನಾದರೂ ಮಾಡಿದ್ದಾರಾ? ನಾನು ಮುಖ್ಯಮಂತ್ರಿ ಆಗಿದ್ದಾಗ ವರ್ಷಕ್ಕೆ 3 ಲಕ್ಷ ಮನೆ ಕೊಟ್ಟಿದ್ದೆ. ನಮ್ಮ ಸರ್ಕಾರವಿದ್ದಾಗ 7 ಕೆಜಿ ಅಕ್ಕಿ ಕೊಡ್ತಿದ್ದೆ, ಈಗ 5 ಕೆಜಿ ಕೊಡ್ತಿದ್ದಾರೆ ಎಂದು ಟೀಕಿಸಿದರು.

ನಾವು ಘೋಷಿಸಿದ ಕಾರ್ಯಕ್ರಮಗಳಿಗೆ ಇವರು ಗುದ್ದಲಿ ಪೂಜೆ ಮಾಡ್ತಿದ್ದಾರೆ. ವಿವೇಕರಾವ್ ಪಾಟೀಲ್‌ ಗೆ ಸಿದ್ದರಾಮಯ್ಯ ಟಿಕೆಟ್ ಕೊಡದೇ ಮೋಸ ಮಾಡಿದ್ರು ಅಂತಾ ರಮೇಶ್ ಜಾರಕಿಹೊಳಿ‌ ಹೇಳ್ತಿದ್ದಾರೆ. ನಮ್ಮ ಅಭ್ಯರ್ಥಿ ವಿರುದ್ಧ ವಿವೇಕರಾವ್ ಪಾಟೀಲ್ ಗೆದ್ದರಾದರೂ, ಗೆದ್ದ ಬಳಿಕ ಅವರು ನಮ್ಮ ಪಕ್ಷಕ್ಕೆ ಬರಲಿಲ್ಲ. ಪಕ್ಷಕ್ಕೆ ಬರದೇ ಇರುವವರಿಗೆ ಟಿಕೆಟ್ ಕೊಡಬೇಕೆ? ಅವರು ರಮೇಶ್ ಜಾರಕಿಹೊಳಿ‌ ಅನುಯಾಯಿ. ನಿಮಗೆ ಅಷ್ಟೊಂದು ಪ್ರೀತಿ ಇದ್ದಿದ್ದರೆ ತಮ್ಮನ ಬದಲು ವಿವೇಕರಾವ್ ಪಾಟೀಲರನ್ನೇ ನಿಲ್ಲಿಸಬೇಕಿತ್ತು. ಕಾಂಗ್ರೆಸ್‌ನಿಂದ ಮೂವರು ಕುರುಬರಿಗೆ ಟಿಕೆಟ್ ಕೊಟ್ಟಿದ್ದೇವೆ. ನೀವು ಎಷ್ಟು ಜನರಿಗೆ ಟಿಕೆಟ್ ಕೊಟ್ಟಿದೀರಿ ಎಂದು ಪ್ರಶ್ನಿಸಿದರು.

ಸ್ವಾರ್ಥಕ್ಕಾಗಿ, ಹೆದರಿಸಿ ರಾಜಕಾರಣ ಮಾಡುವುದಲ್ಲ. ಸ್ವಾತಂತ್ರ್ಯಕ್ಕಾಗಿ ಒಬ್ಬರಾದರೂ ಹುತಾತ್ಮರಾಗಿದ್ದಾರಾ? ಬಿಜೆಪಿಯವರು ನಮಗೆ ದೇಶ ಭಕ್ತಿ ಹೇಳಿಕೊಡ್ತಿದ್ದಾರೆ‌. ಗಾಂಧೀಜಿಯವರನ್ನು ಕೊಂದು ಹಾಕಿದವರು ಇದೇ ಆರ್‌ಎಸ್‌ಎಸ್​ನವರು. ಗೋಡ್ಸೆ ಪಳೆಯುಳಿಕೆಗಳೇ ಈಗಿನ ಆರ್‌ಎಸ್‌ಎಸ್, ಬಿಜೆಪಿಯವರು. ನರೇಂದ್ರ ಮೋದಿ ಆರ್‌ಎಸ್‌ಎಸ್​ನಿಂದ ಬಂದವರು. ಈ ಬಸವರಾಜ ಬೊಮ್ಮಾಯಿ ಆರ್‌ಎಸ್‌ಎಸ್​ನಿಂದ ಬಂದಿಲ್ಲ. ಲಾಟರಿ ಹೊಡೆದು ಮುಖ್ಯಮಂತ್ರಿ ಆಗಿದ್ದಾರೆ. ಇವರನ್ನು ಕಿತ್ತು ಹಾಕಲು ಈಶ್ವರಪ್ಪ ಮಾತಾಡ್ತಿದ್ದಾನೆ ಎಂದು ಏಕವಚನದಲ್ಲಿ ಟೀಕಿಸಿದರು..

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here