ಸಾಹಿತ್ಯ ಪರಿಷತ್ ನಲ್ಲಿ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ

0
26

ಕಲಬುರಗಿ: ಮಹಾನ್ ಮಾನವತಾವಾದಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವಾದರ್ಶಗಳನ್ನು ನಾವು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವಂತೆ ಸಂಕಲ್ಪ ಇಂದು ಮಾಡಬೇಕಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಗರದ ಕನ್ನಡ ಭವನದಲ್ಲಿ ಸೋಮವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಡಿ, ಸಮ ಸಮಾಜಕ್ಕಾಗಿ ಶ್ರಮಿಸಿದ ಬಾಬಾಸಾಹೇಬ ಡಾ.ಅಂಬೇಡ್ಕರ್ ಅವರು ನಮಗೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಅವರ ಬದುಕು ನಮಗೆಲ್ಲರಿಗೂ ಪ್ರೇರಣಾದಾಯಕವಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.

Contact Your\'s Advertisement; 9902492681

ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಸುರೇಶ ಡಿ.ಬಡಿಗೇರ, ಶಿವರಾಜ್ ಎಸ್.ಅಂಡಗಿ, ಗೌರವ ಕೋಶಾಧ್ಯಕ್ಷ ಡಾ.ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ಎಸ್.ಜಿ.ಭಾರತಿ, ರಾಜೇಂದ್ರ ಮಾಡಬೂಳಕರ್ ಭೂಪಾಲ ತೆಗನೂರ, ಮಲ್ಲು ವಣದೆ, ಮಲ್ಲಿಕಾರ್ಜುನ ಬಿರಾದಾರ, ವೈಜನಾಥ ಮೈನಾಳೆ, ವಿಶ್ವನಾಥ ತೊಟ್ನಳ್ಳಿ, ಶರಣಬಸಪ್ಪ ನರೂಣಿ, ಪ್ರಭುಲಿಂಗ ಮೂಲಗೆ, ಜಗದೀಶ ಮರಪಳ್ಳಿ, ಸಂತೋಷ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ಪ್ರಭವ ಪಟ್ಟಣಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here