ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋ ಚಾಲಕರ ವಿರುದ್ಧ ಸೂಕ್ತ ಕ್ರಮ

0
104

ಕಲಬುರಗಿ: ಕಲಬುರಗಿ ನಗರದ ಆಟೋ ಚಾಲಕರು ತಮ್ಮ ಆಟೋಗಳಲ್ಲಿ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಆಟೋರೀಕ್ಷಾಗಳಲ್ಲಿ ತೆಗೆದುಕೊಂಡು ಹೋಗಬಾರದು. ಒಂದು ವೇಳೆ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚು ಆಟೋಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ಕಂಡು ಬಂದಲ್ಲಿ ಅಂತಹ ಆಟೋಗಳ ಮೇಲೆ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಲಬುರಗಿ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಉಪ ಸಾರಿಗೆ ಆಯುಕ್ತರಾದ ಕೆ. ದಾಮೋದರ ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಕಲಬುರಗಿ ನಗರದ ಆಟೋ ರಿಕ್ಷಾ ಚಾಲಕರು ಒಂದು ಆಟೋ ರೀಕ್ಷಾದಲ್ಲಿ ೨೦ರಿಂದ ೨೫ ಚಿಕ್ಕ ಮಕ್ಕಳನ್ನು ಸಾಗಿಸುತ್ತಿರುವ ಪ್ರಯುಕ್ತ ಮಕ್ಕಳು ಅನೇಕ ತೊಂದರೆ ಅನುಭವಿಸುತ್ತಿದ್ದು, ಇದರಿಂದ ಮಕ್ಕಳ ಮೇಲೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ ಎಂದು ಕಲಬುರಗಿಯಲ್ಲಿ ಜುಲೈ ೫ರಂದು ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಕುರಿತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯವರು ಆಯೋಗಕ್ಕೆ ಮನವಿ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here