ಕನ್ನಡ ಧ್ವಜಕ್ಕೆ ಬೆಂಕಿ :ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

0
46

ಶಹಾಬಾದ: ಮಹಾರಾ? ರಾಜ್ಯದ ಕೊಲ್ಲಾಪುರದಲ್ಲಿ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಸುಟ್ಟ ಘಟನೆಯನ್ನು ಖಂಡಿಸಿ ಶುಕ್ರವಾರ ತಾಲೂಕಾ ಕರವೇ ವತಿಯಿಂದ ನೆಹರು ವೃತ್ತದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿ ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಾಡ ಧ್ವಜವನ್ನು ಸುಟ್ಟು ಇಡೀ ಕನ್ನಡ ನಾಡಿಗೆ ಅಪಮಾನ ಮಾಡಿ ವಿಕೃತಿ ಮೆರೆದಿದ್ದಾರೆ.ಘಟನೆ ನಡೆದು ೩ ದಿನಗಳು ಕಳೆದಿದ್ದರೂ ಕೂಡ ರಾಜ್ಯ ಸರ್ಕಾರ ಇದರ ಬಗ್ಗೆ ಕ್ರಮಕೈಗೊಂಡಿಲ್ಲ. ಸರ್ಕಾರಕ್ಕೆ ರಾಜ್ಯದ ಬಗ್ಗೆ ಗೌರವ ಇದ್ದರೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆಯಬೇಕಿತ್ತು. ಘಟನೆ ಮಾಡಿರುವವರ ವಿರುದ್ಧ ನಿರ್ದಾಕ್ಷಿಣ ಕ್ರಮಕೈಗೊಳ್ಳಬೇಕಿತ್ತು.ಸರ್ಕಾರಕ್ಕೆ ರಾಜ್ಯದ ಬಗ್ಗೆ ಕನಿಷ್ಠ ಇಲ್ಲವೆಂದು ಕಾಣಿಸುತ್ತಿದೆ.

Contact Your\'s Advertisement; 9902492681

ರ್ನಾಟಕದಲ್ಲಿ ಮರಾಠಿ ಪುಂಡರನ್ನು ಸರ್ಕಾರ ಗಡಿಪಾರು ಮಾಡಬೇಕು. ಕರ್ನಾಟಕದಲ್ಲಿ ಕನ್ನಡ ವಿರೋಧಿಸುವವರು ಯಾರೇ ಆದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ಗಟ್ಟಿ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕು.ಅಲ್ಲದೇ ಕನ್ನಡ ಧ್ವಜ ಸುಟ್ಟ ಗೂಂಡಾಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳಬೇಕು.

ಎಂಇಎಸ್ ಹಾಗೂ ಶಿವಸೇನೆ ಸಂಘಟನೆಗಳನ್ನು ನಿ?ಧಿಸುವಂತೆ, ಕರ್ನಾಟಕದ ಯಾವುದೇ ಭಾಗದಲ್ಲಿ ಶಿವಸೇನೆ ಹಾಗೂ ಎಂಇಎಸ್ ಧ್ವಜಗಳನ್ನು ಹಾರಿಸುವುದನ್ನು ನಿ?ಧಿಸುವಂತೆ ಆಗ್ರಹಿಸಿದರು. ಒಂದು ವೇಳೆ ಕ್ರಮ ಕೈಗೊಳ್ಳದೇ ಹೋದಲ್ಲಿ ಉಗ್ರ ಹೋರಾಟವನ್ನು ರಾಜ್ಯವ್ಯಾಪಿ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.

ಮಹಾರಾ?ದ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಅವರ ಭಾವಚಿತ್ರ ಸುಟ್ಟುಹಾಕಿ ಆಕ್ರೋಶ ಹೊರಹಾಕಿದರು. ಕರವೇ ತಾಲೂಕಾ ಅಧ್ಯಕ್ಷ ವಿಶ್ವರಾಜ ಫೀರೋಜಬಾದ, ಕರವೇ ಕಲ್ಯಾಣ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಗೋಪಾಲ ನಾಟೀಕಾರ, ಕರವೇ ಜಿಲ್ಲಾಧ್ಯಕ್ಷ ಸಂತೋಷ ಚೌಧರಿ, ಜಿಲ್ಲಾ ಗೌರವಾಧ್ಯಕ್ಷ ಮಂಜು ಕುಸನೂರ, ಚಿತ್ತಾಪೂರ ತಾಲೂಕಾಧ್ಯಕ್ಷ ನರಹರಿ ಕುಲಕರ್ಣಿ, ಕ್ರಾಂತಿವೀರ ಸಂಗೊಳಿ ರಾಯಣ್ಣ ಯುವ ಘರ್ಜನೆಯ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಮಲ್ಲಣ್ಣ ಕಾರೊಳ್ಳಿ, ದಸಂಸ ಜಿಲ್ಲಾ ಸಮಿತಿ ಸಂಚಾಲಕ ಬಸವರಾಜ ಮಯೂರ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here