ಸಂಗೊಳ್ಳಿ ರಾಯಣ್ಣ ಮೂರ್ತಿ ಧ್ವಂಸಕ್ಕೆ ಮುಖಂಡರ ಖಂಡನೆ

0
90

ಸುರಪುರ: ಬೆಳಗಾವಿ ಜಿಲ್ಲೆಯ ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಧ್ವಂಸಗೊಳಿಸಿದ ಘಟನೆಯನ್ನು ಅನೇಕ ಮುಖಂಡರು ಖಂಡಿಸಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಮಲ್ಲು ಬಿಲ್ಲವ್ ಹಾಗು ವಿವೇಕ್ ಕಮತಗಿ ಸೇರಿದಂತೆ ಅನೇಕರು ಈ ಕುರಿತು ಹೇಳಿಕೆಯನ್ನು ನೀಡಿ,ಎಮ್‌ಇಎಸ್ ಮತ್ತು ಶಿವಸೇನೆ ಗೂಂಡಾಗಳು ಕನ್ನಡವನ್ನು ಅವಮಾನಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ.

Contact Your\'s Advertisement; 9902492681

ಕೊಲ್ಲಾಪುರದಲ್ಲಿ ಕನ್ನಡ ಧ್ವಜ ಸುಟ್ಟಿರುವುದು,ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳ ಮೇಲೆ ಕಲ್ಲು ಎಸಿದಿರುವುದು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ವಿಶ್ವಗುರು ಬಸವಣ್ಣನವರ ನಾಮಫಲಕಕ್ಕೆ ಅವಮಾನಿಸಿರುವುದು ಅಕ್ಷಮ್ಯ ಅಪರಾಧವಾಗಿದೆ.ಆದ್ದರಿಂದ ಇಂತಹ ಘಟನೆ ಮತ್ತೆ ನಡೆಯದಂತೆ ಕ್ರಮ ಕೈಗೊಳ್ಳಲು ಎಮ್‌ಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು ಮತ್ತು ಸಂಗೊಳ್ಳಿ ರಾಯಣ್ಣನ ಮೂರ್ತಿ ಧ್ವಂಸಗೊಳಿಸಿದ ಗೂಂಡಾಗಳನ್ನು ಗಡಿಪಾರು ಮಾಡಬೇಕು ಇಲ್ಲವಾದಲ್ಲಿ ಈ ರೀತಿಯ ಘಟನೆಗಳು ಮರುಕಳಿಸುವುದರಲ್ಲಿ ಅನುಮಾನವಿಲ್ಲ.ಆದ್ದರಿಂದ ಕೂಡಲೇ ನಾಡದ್ರೋಹಿ ಸಂಘಟನೆ ನಿಷೇಧಿಸಬೇಕು ಮತ್ತು ಗೂಂಡಾಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here