ದಾವಣಗೆರೆ: ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಆಜಾದಿ ಕಾ ಅಮೃತ ಮಹೋತ್ಸವ್ ಕ್ಯಾಂಪೇನ್ ಕಾರ್ಯಕ್ರಮದ ನಿಮಿತ್ತ ಡಿ.28 ರಂದು ಬೆಳಿಗ್ಗೆ 9 ಗಂಟೆಗೆ ಉದ್ಯೋಗ ಮೇಳವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ(ಯುಬಿಡಿಟಿ ಇಂಜಿನಿಯರಿಂಗ್ ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ, ದಾವಣಗೆರೆ) ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 20 ಪ್ರತಿಷ್ಠಿತ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿವೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎಂ ಹಾಗೂ ಸ್ನಾತಕೋತ್ತರ ಪದವಿ ಪಡೆದ ಗ್ರಾಮೀಣ ಹಾಗೂ ನಗರ ಪ್ರದೇಶದ ನಿರುದ್ಯೋಗ ಯುವಕ/ಯುವತಿಯರು ತಮ್ಮ ಸ್ವವಿವರ, ವಿದ್ಯಾರ್ಹತೆ ದಾಖಲಾತಿಗಳು, ಆಧಾರ್ ಕಾರ್ಡ್ ಮತ್ತು ಬಿ.ಪಿ.ಎಲ್ ಪಡಿತರ ಚೀಟಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವುದು,
ಜೊತೆಗೆ ಈ ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಬಳಸಿ ಆನ್‍ಲೈನ್ ಮೂಲಕ ನೋಂದಣಿ ವೆಬ್‍ಸೈಟ್ https://forms.gle/isZtFsVW6tkXsuJD6 ಮಾಡಬಹುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.