ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯಿಂದ ನೂತನ ಕ್ಯಾಲೆಂಡರ್
ಕಲಬುರಗಿ: ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ವತಿಯಿಂದ 2022ನೇ ನೂತನ ವರ್ಷದ ಕ್ಯಾಲೆಂಡರ್ ನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಳೂರಿನ ನಿವಾಸದಲ್ಲಿ ಬಿಡುಗಡೆ ಗೊಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟರಾದ ಮುಖ್ಯಮಂತ್ರಿ ಚಂದ್ರು, ಹೆಸರಾಂತ ಹಿರಿಯ ಸಾಹಿತಿಗಳು ಹಾಗೂ ಪ್ರಗತಿಪರ ಚಿಂತಕರಾದ ಪ್ರೊ.ಕೆ.ಎಸ್.ಭಗವಾನ್, ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ಅಧ್ಯಕ್ಷ ಜಾಕೀರ್ ಹುಸೇನ್, ರಾಜ್ಯ ಪ್ರಧಾನ ಸಂಚಾಲಕ ಡೈರಿ ವೆಂಕಟೇಶ್, ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್, ಕರ್ನಾಟಕ ಪ್ರದೇಶ ಕುರಬರ ಸಂಘದ ರಾಜ್ಯ ಅಧ್ಯಕ್ಷ ಸುಬ್ರಹ್ಮಣ್ಯ, ಗ್ರಾಮ ಪಂಚಾಯಿ ಮಾಜಿ ಅಧ್ಯಕ್ಷ ಉತ್ತನಹಳ್ಳಿ ಶಿವಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಜುಳಾ ,ಮುಖಂಡರಾದ ರಾಜೇಶ್,ಹಾಗೂ ಮುಖಂಡರಾದ ಪವನ್ ಸಿದ್ದರಾಮ , ಇನ್ನೂ ಮುಂತಾದವರು ಉಪಸ್ಥಿತರಿದ್ದರು.