SSLC ನಂತರ ಮುಂದೇನು ? ತರಬೇತಿ ಕಾರ್ಯಾಗಾರ

0
24

ದೇವದುರ್ಗ : ಗಬ್ಬೂರಿನಲ್ಲಿ ಸಾವಿತ್ರಿ ಬಾಯಿ ಫುಲೆ ರವರ ಜನ್ಮ ದಿನಾಚರಣೆಯ ಅಂಗವಾಗಿ ಮೆಟ್ರಿಕ್ ಪೂರ್ವ ಹಾಸ್ಟೆಲ್ ನ SSLC ವಿದ್ಯಾರ್ಥಿಗಳಿಗೆ ” SSLC ನಂತರ ಮುಂದೇನು ? ” ಎನ್ನುವ ಕಾರ್ಯಕ್ರಮವನ್ನು SFI ವಿದ್ಯಾರ್ಥಿ ಸಂಘಟನೆಯ ಹಾಸ್ಟೆಲ್ ಘಟಕ ಏರ್ಪಡಿಸಿತ್ತು.

ಮುಖ್ಯ ಅತಿಥಿಗಳಾಗಿ ಮಾನ್ಯ ಬಸವಲಿಂಗಪ್ಪ ಪೊಲೀಸ್ ಇನ್ಸ್ ಪೆಕ್ಟರ್ ರವರು ಭಾಗವಹಿಸಿ ತಾವು ಬೆಳೆದು ಬಂದ ರೀತಿಯನ್ನು ಉದಾಹರಣೆಯಾಗಿ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಎಸೆಸೆಲ್ಸಿ ನಂತರ ಮುಂದೇನು ಎಂಬ ವಿಷಯದ ಮೇಲೆ ಸ್ಪರ್ಧಾತ್ಮಕ ಯುಗದಲ್ಲಿ ಇರುವ ಹತ್ತಾರು ಕೋರ್ಸ್ ಗಳ ಬಗ್ಗೆ ಮಾರ್ಗದರ್ಶನ ಮಾಡಿದರು.
ವಿದ್ಯಾರ್ಥಿಗಳು ತುಂಬಾ ಉತ್ಸುಕತೆಯಿಂದ ಭಾಗವಹಿಸಿ ಮಾರ್ಗದರ್ಶನ ಪಡೆದು ಒಟ್ಟು ಸಂವಾದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಗಬ್ಬೂರು ಹೋಬಳಿ ಘಟಕದ ಅಧ್ಯಕ್ಷ ಹನುಮಂತ ರವರು ಭಾಗವಹಿಸಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ದಲ್ಲಿ ತೊಡಗಬೇಕು, ಎಲ್ಲರಿಗೂ ಉಚಿತ ಮತ್ತು ಕಡ್ಡಾಯ ಹಾಗೂ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಒಗ್ಗಟ್ಟಾಗಿ ನಮ್ಮ ಹಕ್ಕುಗಳಿಗಾಗಿ ಹೊರಡಬೇಕು ಎಂದು ಮಾತನಾಡಿದರು.

ಕಾರ್ಯಕ್ರಮದ ಪ್ರಸ್ತಾವನೆ ಭಾಷಣ ಮಾಡಿದ ಹಾಸ್ಟೆಲ್ ಘಟಕದ ಕಾರ್ಯದರ್ಶಿ ಸಂಗಮೇಶ್ ಮಾತನಾಡಿ ಹಳ್ಳಿಗಾಡಿನ ವಿದ್ಯಾರ್ಥಿಗಳು ನಾವು ಇಂತಹ ಸ್ಪರ್ಧಾತ್ಮಕ ಜಗತ್ತಿನಲ್ಲಿ ದೊಡ್ಡ ಸ್ಥಾನಕ್ಕೆ ಹೋಗುವ ಎಲ್ಲಾ ಅರ್ಹತೆ ಇದ್ದರು ಸರಿಯಾದ ಮಾರ್ಗದರ್ಶನ ಇಲ್ಲದೆ ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಂತಹ ಕಾರ್ಯಕ್ರಮಗಳು ನಮಗೆ ಹೆಚ್ಚು ಉಪಯುಕ್ತವಾಗುತ್ತವೆ ಎಂದು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸ್ಟೆಲ್ ಘಟಕದ ಅಧ್ಯಕ್ಷ ಜಗದೀಶ್ ವಹಿಸಿಕೊಂಡಿದ್ದರು.

ಶ್ರೀನಿವಾಸ, ಚಂದ್ರಕಾಂತ್, ಮಂಜುನಾಥ್, ಮನೋಜ, ಅನಿಲ್ , ನಿತ್ಯಾನಂದ ಸೇರಿದಂತೆ ಹಾಸ್ಟೆಲ್ ನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here