ಕಲಬುರಗಿ: ದೇಶದಲ್ಲಿ ಕೋವಿಡ ಸೋಂಕು ಬಹಳ ವೇಗವಾಗಿ ಹರಡುತ್ತಿರುವುದರಿಂದ ಕರೋನಾ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕಾರ್ಯದರ್ಶಿ ಶ್ರೇಣಿಗಿಂತ ಕೆಳಗಿನ ಶೇ.50ರಷ್ಟು ಮಂದಿಗೆ ಮನೆಯಿಂದಲೇ ಕಛೇರಿ ಕೆಲಸ ನಿರ್ವಹಿಸಲು ಕೇಂದ್ರ ಸರಕಾರ ಅವಕಾಶ ಮಾಡಿಕೊಟ್ಟಿದೆ.
ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗರ್ಭಿಣಿ ಮಹಿಳೆಯರಿಗೆ ಹಾಗೂ ವಿಶೇಷಚೇತನರಿಗೆ ಕಛೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದ್ದಾರೆ.
ರಾಜ್ಯದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಎಲ್ಲಾ ದಿವ್ಯಾಂಗ ನೌಕರರು ಮನೆಯಿಂದಲೇ ಕಛೇರಿ ಕಾರ್ಯ ನಿರ್ವಹಿಸುವ ಮೂಲಕ ಕೋವಿಡ್ ಮೂರನೇ ಅಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದರ ಜೋತೆಗೆ ಜಾಗೃತರಾಗಿರಬೇಕು ಎಂದು ಡಿಸೇಬಲ್ಡ ಹೆಲ್ಪಲೈನ್ ಪೌಂಡೆಶನನ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ತಿಳಿಸಿದ್ದಾರೆ.