ಬೆಂಗಳೂರು: ರಾಜ್ಯ ರಾಜಕಾರಣದ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದ ಬೆನ್ನಲ್ಲೇ, ಸಿಎಂ ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ವಿ.ಆರ್.ವಾಲಾ ಶುಕ್ರವಾರ ಮಧ್ಯಾಹ್ನ 1.30ರ ವೇಳೆಗೆ ವಿಶ್ವಾಸ ಮತ ಸಾಬೀತು ಪಡಿಸುವಂತೆ ಆದೇಶ ನೀಡಿದ್ದಾರೆ.
ಸ್ಪೀಕರ್ ಅವರ ವಿಳಂಬ ಧೋರಣೆ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಆದೇಶ ನೀಡಿದ್ದಾರೆ. ಇಂದು ಸದನದ ಸಮಯದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜ್ಯಪಾಲ ಅವರು 175 (2) ವಿಧಿಯ ಅನ್ವಯ ರಾಜ್ಯಪಾಲರು ಆದೇಶವನ್ನು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಬಹುಮತ ಸಾಬೀತು ಪಡಿಸುವುದು ಅನಿವಾರ್ಯವಾಗಿದ್ದು, ಇತ್ತ ಮೈತ್ರಿ ಸರ್ಕಾರ ರಾಜ್ಯಪಾಲರ ಆದೇಶದ ವಿರುದ್ಧ ನ್ಯಾಯಾಲಯಕ್ಕೂ ಮೊರೆ ಹೋಗುವ ಸಾಧ್ಯತೆ ಇದೆ.