ಬಂಡಾಯದ ಮೇರು ಸಾಹಿತಿ ಚಂಪಾ: ಹಣಮಂತ ಶೇರಿ

0
16

ಆಳಂದ: ಚಂಪಾ ಬಂಡಾಯದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾಗಿದ್ದರು ಎಂದು ಆಳಂದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ ಅಧ್ಯಕ್ಷ ಹಣಮಂತ ಶೇರಿ ಖಜೂರಿ ಅಭಿಪ್ರಾಯಪಟ್ಟರು.

ಸೋಮವಾರ ಆಳಂದ ಪಟ್ಟಣದ ಪೂಜ್ಯ ರಾಜಶೇಖರ ಮಹಾಸ್ವಾಮೀಜಿ ಬಿ ಎಡ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜರುಗಿದ ಶೃದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಅಗಲಿದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ಅವರಿಗೆ ನುಡಿನಮನ ಸಲ್ಲಿಸಿದರು.

Contact Your\'s Advertisement; 9902492681

ಚಂಪಾ ಬಹುಮುಖ ವ್ಯಕ್ತಿತ್ವದ ಸಾಹಿತಿಯಾಗಿದ್ದು ತಮಗೆ ಅನಿಸಿದ್ದನ್ನು ನೇರವಾಗಿ ಹೇಳುವ ಛಾತಿ ಬೆಳಸಿಕೊಂಡಿದ್ದರು. ತಮ್ಮ ಸಂಕ್ರಮಣ ಸಾಹಿತ್ಯ ಪತ್ರಿಕೆಯ ಮೂಲಕ ಈ ನಾಡಿನ ಅನೇಕ ಉದಯೋನ್ಮುಖ ಲೇಖಕರಿಗೆ ಅವಕಾಶ ಮಾಡಿಕೊಟ್ಟಿದ್ದರು.

ಅಧ್ಯಾಪನ ವೃತ್ತಿಯ ಜೊತೆಗೆ ಬರಹ, ಕಾವ್ಯ, ನಾಟಕ, ಸಂಪಾದನೆ, ವಿಮರ್ಶೆ, ಹೋರಾಟ ಸೇರಿದಂತೆ ಅನೇಕ ಜನಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದರು ಅಲ್ಲದೇ ಕೆಲವು ದಿನಗಳ ಕಾಲ ರಾಜಕಾರಣದಲ್ಲಿಯೂ ಸಕ್ರೀಯರಾಗಿದ್ದರು ಅವರನ್ನು ಕಳೆದುಕೊಂಡ ಕನ್ನಡ ಸಾರಸತ್ವ ಲೋಕ ಮತ್ತಷ್ಟೂ ಬಡವಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾಲೇಜು ಪ್ರಾಚಾರ್ಯ ಅಶೋಕರೆಡ್ಡಿ, ಸಿಬ್ಬಂದಿಗಳು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here