ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಅಭಿಯಾನ ಕಾರ್ಯಕ್ರಮ

0
40

ಕಲಬುರಗಿ: ಸಮುದಾಯದಲ್ಲಿ  ಕ್ಷಯರೋಗದ (ಟಿಬಿಯ) ಲಕ್ಷಣಗಳು ಇರುವ ಯಾವುದೇ ವ್ಯಕ್ತಿ ಕಂಡು ಬಂದರೆ ಅವರಿಗೆ ಕ್ಷಯರೋಗ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಬೇಕು ಗುಣಮುಖವಾಗುವಂತಹ ರೋಗವಾಗಿದೆ ಇದರ ಬಗ್ಗೆ ಭಯ ಪಡದೆ ಕ್ಷಯ ಖಚಿತವಾಗಿರುವ ರೋಗಿಗು  ಸರಿಯಾದ  ರೀತಿಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖವಾದಗ ಕ್ಷಯರೋಗ ಮುಕ್ತ ಕರ್ನಾಟಕ ಮಾಡಲು ಸಾಧ್ಯವಿದೆ ಕ್ಷಯ ರೋಗ ಮುಕ್ತ ಕರ್ನಾಟಕಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಜಿಲ್ಲಾ ಕ್ಷಯರೋಗ ನಿರ್ಮೂಲನ ಹಿರಿಯ ನಿರೀಕ್ಷಣಾಧಿಕಾರಿ ಸಂತೋಷ ಕುಡಳ್ಳಿ ಹೇಳಿದರು.

ಅವರು ವಾಡಿ  ಪಟ್ಟಣದ ಇಂಗಳಗಿ ಗ್ರಾಮ ಪಂಚಾಯಿತಿಯಲ್ಲಿ  ಜಿಲ್ಲಾ ಪಂಚಾಯತ ಮತ್ತು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಕಲಬುರಗಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಚಿತ್ತಾಪುರ ಇವರ ಸಂಯೋಗದಲ್ಲಿ ಹಮ್ಮಿಕೊಂಡ. ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಟಿಬಿ ಸೋಲಿಸಿ ಕರ್ನಾಟಕದಲ್ಲಿ ಗೆಲ್ಲಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ಗ್ರಾಮದ ಸದಸ್ಯರು ಸ್ವಸಹಾಯ ಸಂಘದ ಮಹಿಳೆಯರು ಸಾಮಾನ್ಯ ಪ್ರಜೆಗಳು ಕೈ ಜೋಡಿಸುವುದರ ಜೊತೆಗೆ ಸಮುದಾಯದ ಜನರಿಗೆ ಕ್ಷಯರೋಗ  ಕುರಿತು ಅರಿವು ಮಾಹಿತಿ ನೀಡಬೇಕು ಅಂದಾಗ ಮಾತ್ರ ರಪಡಿಸಿಕೊಳ್ಳಸಾಧ್ಯವೆಂದು ಅವರು ಸರ್ಕಾರ ಕೈಗೊಂಡಿರುವ ಮಹತ್ವದ ಕಾರ್ಯಕ್ರಮ ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಎಂಬ ಘೋಷವಾಕ್ಯದಂತೆ ಸಮುದಾಯದ ಜನರು ಕ್ಷಯರೋಗ ನಿರ್ಮೂಲನಗೆ ಪಣತೊಡಬೇಕೆಂದರು.

Contact Your\'s Advertisement; 9902492681

ನಂತರ ಜಿಲ್ಲಾ ಡಿ ಆರ್ ಟಿಬಿ ಸಮಾಲೋಚಕರಾದ ಮಂಜುನಾಥ ಕಂಬಾಳಿಮಠ ಅವರು ಮಾತನಾಡುತ್ತ ಕ್ಷಯರೋಗ ಗಾಳಿ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುವಂತ ರೋಗವಾಗಿದ್ದು ಪ್ರತಿ ಒಬ್ಬರು ಎಚ್ಚರವಹಿಸಬೇಕು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಕ್ಷಯರೋಗ ಪರೀಕ್ಷೆ  ಮತ್ತು ಚಿಕಿತ್ಸೆ  ಸಂಪೂರ್ಣವಾಗಿ ಉಚಿತ ಇರುತ್ತದೆ. ಮತ್ತು ಆರು ತಿಂಗಳ ಚಿಕಿತ್ಸೆಯ ಸಂಧರ್ಬದಲ್ಲಿ ರೋಗಿಗಳಿಗೆ ಪೌಷ್ಟಿಕ ಆಹಾರ ಸಂಬಂದ ಮಾಸಿಕ  ೫೦೦ ರೂ, ಗಳನ್ನು ಕೊಡಲಾಗುತ್ತದೆ ಇದರ ಉಪಯೋಗ ಪ್ರತಿ ರೋಗಿಯು ಪಡೆಯಬೇಕು ಎಂದು ತಿಳಿಸಿದರು.

ವೇದಿಕೆ ಮೇಲೆ ಪ್ರಮುಖರಾದ ತಾಲ್ಲೂಕ ಹಿರಿಯ ಕ್ಷಯರೋಗ ಮೇಲ್ವಿಚಾರಕ ಉದಯಕುಮಾರ್ ಭಾಗೋಡಿ. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳ ಬುಳ್ಳಾ. ಅವರು ಮಹಿಳೆಯರ ಋತು ಸಾವದಿಂದ ಅಗುವ ತೊಂದರೆ ಬಗ್ಗೆ ಆರೋಗ್ಯ ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಸಮುದಾಯಾಧಿಕಾರಿ ತ್ರಿವೇಣಿ ಜಾಧವ್. ಸಮುದಾಯ ಆರೋಗ್ಯಾಧಿಕಾರಿ  ಜನಿಮಾ ಇದ್ದರು.

ವಿಶೇಷವಾಗಿ ಕ್ಷಯರೋಗ ಕುರಿತು ಬಿತ್ತಿ ಪತ್ರದ ಮೂಲಕ ಜಾಗೃತಿ ಮೂಡಿಸಿಲಾಯಿತು, ಆಶಾ ಕಾರ್ಯಕರ್ತರಾದ ಸಾವಿತ್ರಿ ಗೋಪಲ್, ಮಂಜುಳ,ರಾಜೇಶ್ವರಿ, ಸಾವಿತ್ರಿ ಪರಮೇಶ್ವರ, ಜಯಶ್ರೀ, ಮಲ್ಲಮ್ಮ, ಶಕುಂತಲಾ, ಗ್ರಾಮದಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಭಾಗವಹಿಸಿದರು. ಉದಯಕುಮಾರ್ ಸ್ವಾಗತಿಸಿದರು, ಮಂಜುಳಾ ನಿರೂಪಿಸಿದರು. ತ್ರಿವೇಣಿ ವಂದಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here