ಸುರಪುರ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಘಟಕದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃಧ್ಧಿ ಇಲಾಖೆ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಮಾತನಾಡಿ,ನಮ್ಮ ಅಂಗನವಾಡಿ ನೌಕರರ ೨೬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನೇಕ ವರ್ಷಗಳಿಂದ ಸರಕಾರಕ್ಕೆ ಮನವಿ ಮಾಡಲಾಗುತ್ತಿದೆ.ಆದರೆ ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ ತಿಂಗಳು ೧೦ನೇ ತಾರೀಖು ಬೆಂಗಳೂರಿನಲ್ಲಿ ಅನಿರ್ಧಿಷ್ಟ ಹೋರಾಟ ಹಮ್ಮಿಕೊಳ್ಳಲಾಗಿತ್ತು.ಆದರೆ ಮುಖ್ಯಮಂತ್ರಿಗಳು ನಮ್ಮ ಮುಖಂಡರ ಸಭೆಯನ್ನು ನಡೆಸಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದರಿಂದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು,ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ನಂತರ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳಿಗೆ ಬರೆದ ಮನವಿಯನ್ನು ಕಚೇರಿಯ ಸಹಾಯಕರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷರಾದ ಬಸ್ಸಮ್ಮ ಆಲ್ಹಾಳ,ಖಜಾಂಚಿ ರಾಧಾಬಾಯಿ ಲಕ್ಷ್ಮೀಪುರ,ಹುಣಸಗಿ ತಾಲೂಕು ಅಧ್ಯಕ್ಷ ನಸೀಮಾ ಮುದನೂರು,ಮಂಜುಳಾ ಝಂಡದಕೇರಾ,ಫರವಿನ್ ಶರ್ಕಿಮೊಹಲ್ಲಾ,ಚಂದ್ರಕಲಾ ದೇರವಗೋನಾಲ,ಮಲ್ಲಮ್ಮ ದೇವತ್ಕಲ್,ಸುಲೋಚನಾ ವಜ್ಜಲ್,ಸೂಗಮ್ಮ ದೀವಳಗುಡ್ಡ,ಜಯಮಾಲಾ ರತ್ತಾಳ,ಬೀಬಿ ಇಶ್ರತ್ ಕೆಂಭಾವಿ,ವಿಜಯಲಕ್ಷ್ಮೀ ಕೆಂಭಾವಿ ಸೇರಿದಂತೆ ಅನೇಕರಿದ್ದರು.