ನಾಡೋಜ ಚೆನ್ನವೀರ ಕಣವಿ ಸೇರಿದಂತೆ ಬಾಗಲಕೋಟೆ ಜಿಲ್ಲೆಯಲ್ಲೂ ಕೊರೊನಾ ಸ್ಪೋಟ

0
18

ಧಾರವಾಡ/ತುಮಕೂರು: ಹಿರಿಯ ಕವಿ ನಾಡೋಜ ಚನ್ನವೀರ‌ ಕಣವಿ ಹಾಗೂ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿ.ಬಿ.ಜಯಚಂದ್ರ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.ಚೆಂಬೆಳಕಿನ ಕವಿ ಎಂದೇ ಖ್ಯಾತಿ‌ ಪಡೆದಿರುವ 93 ವರ್ಷದ ಕಣವಿ, ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಹೋಗಿದ್ದರು.

ಈ ವೇಳೆ ಕೊರೊನಾ ಟೆಸ್ಟ್ ಮಾಡಿದಾಗ ವರದಿ ಪಾಸಿಟಿವ್ ಬಂದಿದೆ. ಸದ್ಯ ಚನ್ನವೀರ‌ ಕಣವಿ ಅವರು ಧಾರವಾಡ ಎಸ್ ಡಿ.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಯಚಂದ್ರಗೂ ಕೊರೋನಾ: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಟಿ.ಬಿ.ಜಯಚಂದ್ರ ಅವರಿಗೂ ಕೊರೋನಾ ಸೋಂಕು ತಗುಲಿದ್ದು, ಅವರ ಸಂಪರ್ಕಕ್ಕೆ ಬಂದವರಿಗೆ ಆತಂಕ ಶುರುವಾಗಿದೆ. ಇನ್ನು ಎರಡನೇ ಅಲೆ ವೇಳೆಯೂ ಜಯಚಂದ್ರ ಅವರಿಗೆ ಕೊರೋನಾ ವಕ್ಕರಿಸಿತ್ತು. ಇದೀಗ ಎರಡನೇ ಬಾರಿಗೆ ಸೋಂಕು ತಗುಲಿದೆ.

Contact Your\'s Advertisement; 9902492681

ಒಂದೇ ದಿನ 23 ಜನ ವಿದ್ಯಾರ್ಥಿಗಳಿಗೆ ಕೊರೋನಾ: ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾ ಸ್ಪೋಟವಾಗಿದೆ. ಒಂದೇ ದಿನ 23 ಜನ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು, ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಟೆಸ್ಟಿಂಗ್ ನಡೆಯುತ್ತಿರೋ ಬೆನ್ನಲ್ಲೇ ಒಂದೇ ದಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಬಾಗಲಕೋಟೆ ನಗರದ ಒಂದೇ ಶಾಲೆಯಲ್ಲಿ 12 ವಿದ್ಯಾರ್ಥಿಗಳಿಗೆ ಕೊರೋನಾ ತಗುಲಿದೆ ಎಂದು ಬಾಗಲಕೋಟೆ ಡಿ.ಎಚ್‌.ಓ ಡಾ.ಅನಂತ.ದೇಸಾಯಿ ಮಾಹಿತಿ ನೀಡಿದ್ದಾರೆ.

ಕೊರೋನಾ ಸೋಂಕು ಕಂಡು ಬಂದ ಶಾಲಾ ವಿದ್ಯಾರ್ಥಿಗಳಿಗೆ ಹೋಮ್ ಐಸೋಲೇಶನ್ ಮಾಡಲಾಗಿದ್ದು, ಶಾಲೆಗಳಿಗೆ ರಜೆ ನೀಡುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು(ಜ.14) ರಾಜ್ಯದಲ್ಲಿ 28,723 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು,14 ಮಂದಿ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಸಾವನ್ನಪ್ಪಿರುವ 14 ಮಂದಿಯಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ಪಾಸಿಟಿವಿಟಿ ರೇಟ್ ಶೇ.12.98ಕ್ಕೆ ಏರಿಕೆಯಾಗಿದೆ. ಇನ್ನೂ 3,105 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here