ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 20221ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ. 15,000/- ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವವಿವರವುಳ್ಳ ಮನವಿಯೊಂದಿಗೆ ದೃಢಿಕೃತ ಎಸ್.ಎಸ್.ಎಲ್.ಸಿ ಪ್ರಮಾಣಪತ್ರದ ಪ್ರತಿ ಅಥವಾ ಅಧಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣಪತ್ರದ ಪ್ರತಿಯನ್ನು ಸಲ್ಲಿಸಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 15, 2022 ಕೊನೆಯ ದಿನಾಂಕವಾಗಿದ್ದು, ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- 560002 ಗೆ ಕಳುಹಿಸಿಕೊಡಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.kannadapustakapradhikara.com ಹಾಗೂ ದೂರವಾಣಿ ಸಂಖ್ಯೆ: 22484516 / 22107704 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.