ಕಲಬುರಗಿ; ಕಲಬುರಗಿ ನಗರದಲ್ಲಿ ಇತ್ತೀಚೆಗೆ ನಡೆದ ೩೬ನೇ ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಪುರಸ್ಕೃತರನ್ನು ಶರಣಬಸವ ವಿಶ್ವವಿದ್ಯಾಲಯ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಮಂಗಳವಾರ ವಿವಿ ಸಮಾವೇಶ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಕಲಬುರಗಿ ಬ್ರ್ಯಾಂಡ್ ಪ್ರಶಸ್ತಿ ಪುರಸ್ಕೃತರಾದ ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿಗಳು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ, ಸೇರಿದಂತೆ ಕಲಬುರಗಿ ಬ್ರ್ಯಾಂಡ್ ಪ್ರಶಸ್ತಿ ಪುರಸ್ಕೃತ ಪ್ರಶಾಂತ ಬಿಜಾಸ್ಪುರ್ ಹಾಗೂ ಪತ್ರಕರ್ತರ ಸಮ್ಮೇಳನದಲ್ಲಿ ಅಭಿಮಾನಿ ಪ್ರಕಾಶನ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಮತ್ತು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಡೀನ್ ಟಿ.ವಿ.ಶಿವಾನಂದನ್ ಅವರಿಗೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ವಿ ನಿಷ್ಠಿ ಸನ್ಮಾನಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಡಾ.ಅಪ್ಪಾಜಿಯವರ ಪರವಾಗಿ ಸನ್ಮಾನ ಸ್ವೀಕರಿಸಿದರು. ಕೇಂದ್ರ ಸರ್ಕಾರದಿಂದ ಇನ್‌ಕ್ರೆಡಿಬಲ್ ಇಂಡಿಯಾ (ಕರ್ನಾಟಕ ಚಾಪ್ಟರ್) ಸದಸ್ಯೆಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಮತ್ತು ಪ್ರಯಾಣ ವಿಭಾಗದ ಚೇರ್‌ಪರ್ಸನ್ ಪ್ರೊ.ವಾಣಿ ಅವರ ಸಾಧನೆಗಾಗಿ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ನಿರಂಜನ್ ನಿಷ್ಠಿ ಅವರು ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವವನ್ನು ಸಲ್ಲಿಸಿದರು ಮತ್ತು ಅಂತಹ ಪ್ರಶಸ್ತಿಗಳನ್ನು ಪಡೆಯುವುದೆಂದರೆ, ಸಮಾಜವು ಆಯಾ ಕ್ಷೇತ್ರಗಳಲ್ಲಿನ ಎಲ್ಲಾ ಹೋರಾಟ ಮತ್ತು ಸಾಧನೆಗಳನ್ನು ಗುರುತಿಸಿದೆ ಎಂದರ್ಥ ಎಂದು ಹೇಳಿದರು. ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸೂಚಕವಾಗಿ ಅಂತಹ ಪ್ರಶಸ್ತಿಗಳನ್ನು ಪ್ರತಿಯೊಬ್ಬ ವ್ಯಕ್ತಿಯೂ ಪ್ರಶಂಸಿಸಬೇಕು ಮತ್ತು ಗುರುತಿಸಬೇಕು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದವರು ನಡೆಸುತ್ತಿರುವ ಶರಣಬಸವೇಶ್ವರ ವಸತಿ ಶಾಲೆಯ ಹಳೆವಿದ್ಯಾರ್ಥಿಯಾಗಿರುವ ಯುವ ಚಾರ್ಟರ್ಡ್ ಅಕೌಂಟೆಂಟ್ ಪ್ರಶಾಂತ ಬಿಜಾಸಪುರ ಮತ್ತು ೨೧ ನೇ ವಯಸ್ಸಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆದ ಬಿಜಾಸಪುರ ಅವರ ಈ ಸಾಧನೆಯನ್ನು ಅವರು ಪ್ರಶಂಸಿಸಿದರು. ಈ ಚಿಕ್ಕ ವಯಸ್ಸಿನಲ್ಲಿ ಈ ಸಾಧನೆಗಾಗಿ ನಿಮ್ಮ ಬಗ್ಗೆ ಎಲ್ಲರಿಗೂ ಹೆಮ್ಮೆ ಇದೆ ಎಂದರು.
ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಅವರು ತಮ್ಮ ಅಧ್ಯಕ್ಷೀಯ ಭಾ?ಣದಲ್ಲಿ ಎಲ್ಲಾ ಮೂರು ಪ್ರಶಸ್ತಿ ಪುರಸ್ಕೃತರನ್ನು ಮತ್ತು ಪ್ರೊ ವಾಣಿ ಅವರ ಸಾಧನೆಗಳನ್ನು ಪ್ರಶಂಸಿಸಿದರು ಮತ್ತು ಈ ಸಾಧನೆಗಳಿಗಾಗಿ ವಿಶ್ವವಿದ್ಯಾಲಯವು ಹೆಮ್ಮೆಪಡುತ್ತದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಶಾಂತ ಬಿಜಾಸಪುರ ಅವರು ಈ ಪ್ರಶಸ್ತಿಯನ್ನು ಶರಣಬಸವೇಶ್ವರ ಸಂಸ್ಥಾನ ಮತ್ತು ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಗೆ ಸಮರ್ಪಿಸುವುದಾಗಿ ತಿಳಿಸಿದರು. ಡಾ. ಅಪ್ಪಾಜಿ ಅವರು ತಮ್ಮ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳನ್ನು ವೃತ್ತಿಪರ ಜೀವನದ ವಿವಿಧ ಕ್ಷೇತ್ರಗಳಲ್ಲಿ ಉತ್ತುಂಗಕ್ಕೇರಲು ಸಹಾಯ ಮಾಡಿದ್ದಾರೆ ಮತ್ತು ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ನನಗೆ ಜೀವನದಲ್ಲಿ ಗುರಿ ಹೊಂದಲು ಅನುಕೂಲವಾಗಿದೆ ಎಂದು ಹೇಳಿದರು.
ಶಿವಾನಂದನ್ ಅವರು ತಮ್ಮ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡಲು ಅವಕಾಶವನ್ನು ಒದಗಿಸಿದ್ದಕ್ಕಾಗಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ನಿಷ್ಠಿ, ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಸಮಕುಲಪತಿ ಪ್ರೊ.ವಿ.ಡಿ.ಮೈತ್ರಿ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಅಧಿಕಾರಿಗಳಿಗೆ ಹಾಗೂ ಈ ಮನ್ನಣೆ ಪಡೆಯಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಪ್ರೊ.ವಾಣಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಚೆನ್ನಪ್ಪ ಸ್ವಾಗತಿಸಿದರೆ, ಮತ್ತೋರ್ವ ವಿದ್ಯಾರ್ಥಿ ರಘುವೀರ್ ಸಿಂಗ್ ನಿರೂಪಿಸಿದರು ಹಾಗೂ ಸು? ವಂದಿಸಿದರು.