ಕಲಬುರಗಿ: 2020ನೇ ಸಾಲಿನ ಕರ್ನಾಟಕ ಸಿವಿಲ್ ಪೊಲೀಸ್ ಸಬ್ ಇನ್ಸೆಪೆಕ್ಟರ್ ಪರೀಕ್ಷೆಯಲ್ಲಿ ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಅಲೆಮಾರಿ ಹೆಳವ ಸಮುದಾಯದ ಕಾಮಣ್ಣ ಹೆಳವರ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಯಾಗುವುದರ ಮೂಲಕ ಸಾಧನೆ ಮೆರೆದಿದ್ದಾರೆ ಮತ್ತು ಅಲೆಮಾರಿ ಹೆಳವ ಸಮುದಾಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಜೀವನದಲ್ಲಿ ಮನೋಸಂಕಲ್ಪ ಮತ್ತು ನಿರಂತರ ಪರಿಶ್ರಮದಿಂದ ಸಾಧನೆ ಮಾಡಬಹುದೆಂದು ತೋರಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿ ಬಡತನವನ್ನು ಮೆಟ್ಟಿ ನಿಂತು ಒಕ್ಕಲುತನ ಮಾಡುವ ಅನ್ನದಾತ ರೈತನ ಮಗನ ಈ ಅಪ್ರತಿಮ ಸಾಧನೆಗೆ ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯ ನಿರ್ದೇಶಕ ಬಸವರಾಜ ಹೆಳವರ ಯಾಳಗಿ ಅಭಿನಂದನೆ ಸಲ್ಲಿಸಿದ್ದಾರೆ.