ಕಲಬುರಗಿ: ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸಿ, ಧ್ವಜಾರೋಹಣ ನಡೆಸಿರುವ ನ್ಯಾಯಾಧೀಶರನ್ನು ಸೇವೆಯಿಂದ ಅಮಾನತ್ತು ಮಾಡಬೇಕು ಎಂದು ಜಯ ಕರ್ನಾಟಕ ರಕ್ಷಣಾ ಸೇನೇಯ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಎಸ್ ಕಿಳ್ಳಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ರಾಯಚೂರಿನ ಜಡ್ಜ್ ಅಂಬೇಡ್ಕರ್ ಫೋಟೊ ತೆಗೆಸುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಅಂಬೇಡ್ಕರ್‌ರವರಿಗೆ ಅಪಚಾರ ಮಾಡಿದ್ದಾರೆ, ಆ ಮೂಲಕ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದರು.
ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವದ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸಿ ಅಗೌರವ ತೋರಿದ ಸೆಶೆನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಕೂಡಲೇ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಅವರು ಮನವಿ ಮಾಡಿದರು.