ಶಹಾಬಾದ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಂದು ಮಂಡನೆ ಮಾಡಿರುವ ಬಜೆಟ್, ಕೋವಿಡ್ ನಂತರದ ಕಾಲದಲ್ಲಿ ದೇಶದ ಸಮಗ್ರ ಆರ್ಥಿಕ ಸುಧಾರಣೆಗೆ ಮತ್ತು ಅಭಿವೃದ್ಧಿಪರವಾದ ಬಜೆಟ್ ಇದಾಗಿದೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಂಡನೆ ಮಾಡಿರುವ ಬಜೆಟ್, ಆರ್ಥಿಕ ಸುಧಾರಣೆ, ಶಿಕ್ಷಣ , ಕೃಷಿ, ಜನರ ಜೀವನ ಮಟ್ಟ ಸುಧಾರಣೆಗೆ ಒತ್ತು ನೀಡಿದೆ. ಜಾಗತಿಕ ಮಟ್ಟದಲ್ಲಿ ಭಾರತ ಸದೃಢವಾಗಿ ಬೆಳೆಯಲು ವೇಗ ದೊರೆತಂತಾಗಿದೆ. ಜೊತೆಗೆ ಆರೋಗ್ಯ ಕ್ಷೇತ್ರವನ್ನು ಮತ್ತ? ಬಲಪಡಿಸಲು ಆದ್ಯತೆ ದೊರೆತಿದೆ .ಅಲ್ಲದೇ ರಾಜ್ಯ, ಕೇಂದ್ರ ಸರ್ಕಾರಿ ನೌಕರರಿಗೆ ಟ್ಯಾಕ್ಸ್ ವಿನಾಯಿತಿ, ದೇಶ ಒಂದು ಮಾಡುವ ೪೦೦ ವಂದೇ ಮಾತರಂ ರೈಲು ಕೊಡುಗೆ ನೀಡಿದೆ.ದೇಶದ ೨೫ಸಾವಿರ ಕಿ.ಮೀ ನ್ಯಾ?ನಲ್ ಹೈವೆ ಮಾಡಲು ಕೇಂದ್ರ ನಿರ್ಧಾರ ಮಾಡಿದೆ.
ಕೃಷಿ ಕ್ಷೇತ್ರದಲ್ಲಿ ಬೆಂಬಲ ಬೆಲೆ ಯೋಜನೆಯಡಿ, ೨.೩೭ ಲಕ್ಷ ಕೋಟಿ ರೂ. ನಲ್ಲಿ ಬೆಳೆ ಖರೀದಿ ನಡೆಯಲಿದೆ. ಸಹಕಾರಿ ಸಂಘಗಳ ತೆರಿಗೆ ದರವನ್ನು ಶೇ.೧೫ ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಕಾವೇರಿ ಸೇರಿದಂತೆ ೫ ನದಿಗಳ ಜೋಡಣೆಗೆ ಅನುಮತಿ ನೀಡಲಾಗಿದೆ. ಈ ಎಲ್ಲಾ ಕಾರ್ಯಗಳಿಂದಾಗಿ ಕೃಷಿಯ ಸಮಗ್ರ ಸುಧಾರಣೆ ಸಾಧ್ಯವಾಗಲಿದೆ.
ಅಲ್ಲದೆ, ಪಿಎಂ ಆವಾಸ್ ಯೋಜನೆಯಡಿ ೮೦ ಲಕ್ಷ ಮನೆಗಳ ನಿರ್ಮಾಣ, ೪೦೦ ವಂದೇ ಭಾರತ್ ರೈಲುಗಳು, ಆಧುನಿಕ ತಂತ್ರಜ್ಞಾನ ಇ-ಪಾಸ್ ಪೋರ್ಟ್ ವ್ಯವಸ್ಥೆ, ೨ ಲಕ್ಷ ಅಂಗನವಾಡಿಗಳ ಉನ್ನತೀಕರಣ, ಹೊಸದಾಗಿ ೩.೮ ಕೋಟಿ ಮನೆಗಳಿಗೆ ನಲ್ಲಿಸಂಪರ್ಕ, ಸೌರ ವಿದ್ಯುತಗೆ ೧೯,೫೦೦ ಕೋಟಿ ರೂ. ಮೊದಲಾದ ಯೋಜನೆಗಳು ದೇಶವನ್ನು ಎಲ್ಲಾ ಆಯಾಮಗಳಿಂದ ಸುಧಾರಣೆ ಮಾಡಲು ಪೂರಕವಾಗಿದೆ. ಒಟ್ಟಾರೆಯಾಗಿ ಇದು ಇದೊಂದು ಉತ್ತಮ ಬಜೆಟ್ ಆಗಿದೆ.ಇಂತಹ ಬಜೆಟ್ ನೀಡಿದ ಆರ್ಥಿಕ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ಶಾಸಕರು ತಿಳಿಸಿದ್ದಾರೆ.