ಕೆರೆಗಳ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

0
108

ಕಲಬುರಗಿ: ಜಿಲ್ಲೆಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳ ಸಮೀಕ್ಷೆ ಕೈಗೊಳ್ಳಲುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿಯ ಜಿಲ್ಲಾ ಮಟ್ಟದ ಕಾರ್ಯನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ೧೬೨ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ೮೧ ಕೆರೆಗಳಿದ್ದು, ಇವೆಲ್ಲುವುಗಳ ಸಮೀಕ್ಷೆ ಕೈಗೊಂಡು ವಿಶೇಷ ಗುರುತಿನ ಸಂಖ್ಯೆ ನೀಡಬೇಕು. ಯಾವುದೇ ಕಾರಣಕ್ಕು ಕೆರೆ ಒತ್ತುವರಿಗೆ ಅವಕಾಶ ನೀಡಬಾರದು. ಎಲ್ಲಾದರು ಒತ್ತುವರಿ ಪ್ರಕರಣಗಳಿದ್ದಲ್ಲಿ ಕೂಡಲೆ ತೆರವುಗೊಳೀಸಬೇಕು. ಒತ್ತುವರಿ ಪ್ರತಿಬಂಧಿಸಲು ಕೆರೆಯ ಸುತ್ತಮುತ್ತ ಗಿಡಗಳನ್ನು ನೆಡುವುದಲ್ಲದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಕೆರೆಗಳ ಅಂತರ್ಜಲವನ್ನು ಮರುಭರ್ತಿ ಮಾಡುವ ಮೂಲಕ ಕೆರೆಗಳ ಪುನಶ್ಚೇತನ ಅಭಿವೃದ್ಧಿ ಮಾಡಬೇಕಿದೆ. ಕೆರೆಯ ನೀರು ಕುಡಿಯಲು ಬಳಸಲಾಗುತ್ತಿದ್ದು, ಯಾವುದೇ ಕಾರಣಕ್ಕು ಒಳಚರಂಡಿ ನೀರು, ರೊಚ್ಚು ನೀರು ನೇರವಾಗಿ ಕೆರೆಗೆ ಹೋಗುವುದನ್ನು ತಡೆಗಟ್ಟಬೇಕು. ಚರಂಡಿ ನೀರು ಮತ್ತು ಕಲ್ಮಶ ನೀರು ಕೆರೆಗೆ ಸೇರಿದಲ್ಲಿ ಮಾನವ ಮತ್ತು ಜಲಚರಗಳಿಗೆ ಜಲ ಕಂಟಕವಾಗಲಿದೆ ಎಂದರು.

ಕೆರೆ ಪ್ರದೇಶದಲ್ಲಿ ಯಾವುದೇ ಕಾರಣಕ್ಕು ಬಿತ್ತನೆಗೂ ಸಾರ್ವಜನಿಕರಿಗೆ ಅವಕಾಶ ನೀಡಕೂಡದು ಎಂದ ಅವರು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮ-೨೦೧೪ ಮತ್ತು ತಿದ್ದುಪಡಿ ಅಧಿನಿಯಮ-೨೦೧೮ರಂತೆ ಜಿಲ್ಲಾ ಪ್ರಾಧಿಕಾರಕ್ಕೆ ಅಗತ್ಯ ಸದಸ್ಯರನ್ನು ನೇಮಕಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಸಂದರ್ಭದಲ್ಲಿಯೂ ಜಿಲ್ಲೆಯ ಕೆರೆಗಳ ಮಾಹಿತಿ ಕೇಳಬಹುದು, ಹೀಗಾಗಿ ಜಿಲ್ಲೆಯ ಎಲ್ಲಾ ಕೆರೆಗಳ ಸಮಗ್ರ ಮಾಹಿತಿ ಇಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಅಶೋಕ ಅಂಬಲಗಿ ಅವರು ಜಿಲ್ಲೆಯ ಕೆರೆಗಳ ಸ್ಥಿತಿಗತಿ ಕುರಿತು ವಿವರಣೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಸಹಾಯಕ ಆಯುಕ್ತ ರಾಹುಲ ಪಾಂಡ್ವೆ, ಜಂಟಿ ಕೃಷಿ ನಿರ್ದೇಶಕ ಡಾ.ರತೇಂದ್ರನಾಥ ಸುಗೂರು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ತಾಲೂಕುಗಳ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here