ಹೆಚ್.ಕೆ.ಇ ಸಂಸ್ಥೆಯಲ್ಲಿ ಗಣಕಯಂತ್ರ ಪ್ರಯೋಗಾಲಯ ಉದ್ಘಾಟನೆ: ಹಳೆಯ ವಿದ್ಯಾರ್ಥಿ ಸನ್ಮಾನ

0
23

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಟೋಮೋಬೈಲ್ ವಿಭಾಗದ ನೂತನ ಗಣಕಯಂತ್ರ ಪ್ರಯೋಗಾಲಯನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಅವರು ಉದ್ಘಾಟಿಸಿ ಮಾತನಾಡುತ್ತಾ ಡಿಪ್ಲೋಮಾ ಶಿಕ್ಷಣದಲ್ಲಿ ಪ್ರಾಯೋಗಿಕ ವಿಷಯಗಳಿಗೆ ಹೆಚ್ಚಿನ ಮಹತ್ವ ನೀಡಿರುವುದರಿಂದ ಪ್ರಾಯೋಗಾಲಯಗಳ ಉನ್ನತೀಕರಣಕ್ಕೆ ಹೈದ್ರಾಬಾದ ಶಿಕ್ಷಣ ಸಂಸ್ಥೆಯ ಬದ್ದವಾಗಿದೆ ಎಂದು ಹೇಳಿದರು.

ನಗರದ ಹೆಚ್.ಕೆ.ಇ ಸಂಸ್ಥೆಯ ಪಾಲಿಟೆಕ್ನಿಕ್ ೧೯೮೬ ರಿಂದ ಈ ಭಾಗದ ಮಕ್ಕಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ಸೇವೆ ಒದಗಿಸುತ್ತದೆ. ಸಂಸ್ಥೆಯು ಪಾಲಿಟೆಕ್ನಿಕ್‌ನ್ನು ಮಾದರಿ ಸಂಸ್ಥೆಯನ್ನಾಗಿ ರೂಪಿಸಲು ಶ್ರಮಿಸುತ್ತಿದೆ ಎಂದು ಬಿಲಗುಂದಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಆಟೋಮೋಬೈಲ್ ವಿಭಾಗದ ಹಳೆಯ ವಿದ್ಯಾರ್ಥಿಯಾದ ಶರಣಯ್ಯ ವಿಭೂತಿ ಅವರು ಆರ್ ಟಿ ಓ ಅಧಿಕಾರಿಯಾಗಿದಕ್ಕೆ ಅವರನ್ನು ಸನ್ಮಾನಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಡಾ.ಶರಣಬಸಪ್ಪ ಹರವಾಳ, ಕಾರ್ಯದರ್ಶಿ ಡಾ.ಜಗನ್ನಾಥ ಬಿಜಾಪುರ, ಜಂಟಿ ಕಾರ್ಯದರ್ಶಿ ಡಾ.ಮಹಾದೇವಪ್ಪ ರಾಂಪುರೆ, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಹಾಗೂ ಕನ್ವೀನರರಾದ ವಿನಯ್ ಪಾಟೀಲ, ಆಡಳಿತ ಮಂಡಳಿಯ ಸದಸ್ಯರಾದ ಡಾ.ಶರಣಬಸಪ್ಪ ಕಾಮರೆಡ್ಡಿ, ಡಾ.ಕೈಲಾಸ ಪಾಟೀಲ, ಡಾ.ಅನಿಲಕುಮಾರ ಪಟ್ಟಣ, ಸಾಯಿನಾಥ ಪಾಟೀಲ, ಡಾ.ನಾಗೇಂದ್ರ ಮಂಠಾಳೆ, ಅರುಣಕುಮಾರ ಪಾಟೀಲ, ಬಸವರಾಜ ಖಂಡೇರಾವ, ಸೋಮನಾಥ ನಿಗ್ಗುಡಗಿ, ಗಿರಿಜಾ ಶಂಕರ, ರಜನಿಶ ವಾಲಿ, ರಾಜಶೇಖರ ಪಾಟೀಲ, ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ಬಬಲೇಶ್ವರ, ಆಟೋಮೋಬೈಲ್ ವಿಭಾಗದ ಮುಖ್ಯಸ್ಥ ಶಿವಾನಂದ ಚಿಕ್ಕಮಠ, ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here