ಶಹಾಬಾದ :ಮಹಿಳೆಯರು ಪುರುಷರಂತೆ ಸಮಾನರು ಎನ್ನುವುದಕ್ಕೆ ಇಂದಿನ ಎಲ್ಲಾ ರಂಗಗಳಲ್ಲಿ ಪುರುಷರಂತೆ ಕಾರ್ಯನಿರ್ವಹಿಸುತ್ತಿರುವುದೇ ಸಾಕ್ಷಿ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಸ್.ಹೊಸಮನಿ ಹೇಳಿದರು.
ಅವರು ಸೋಮವಾರ ನಗರದ ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರ ಬದುಕು ಚೆನ್ನಾಗಿ ಕಾಣಬೇಕಾದರೆ ಹೆಣ್ಣು ಅಥವಾ ಗಂಡು ಯಾವುದೇ ಮಗು ಇರಲಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಬೇಕು.ಸಮ ಸಮಾಜ ನಿರ್ಮಾಣಕ್ಕೆ ಮಹಿಳೆಯರು ಮುಖ್ಯವಾಹಿನಿಗೆ ಬರುವಂತಾಗಬೇಕು. ಹಿಂದೆ ಹೆಣ್ಣು ಮಗು ಹುಟ್ಟಿದರೆ ಮೂಗು ಮುರಿಯುವ ಕಾಲವಿತ್ತು.ಆದರೆ ಇತ್ತೀಚಿನ ದಿನಗಳಲ್ಲಿ ಇದು ಬದಲಾಗಿದೆ.ಸಮಾಜದಲ್ಲಿ ಹೆಣ್ಣಿಗೆ ಸಮಾನ ಅವಕಾಶಗಳಿದ್ದು, ಹೆಣ್ಣು ಮಕ್ಕಳಿಗೆ ಒಳ್ಳೆಯ ಮತ್ತು ಕಡ್ಡಾಯ ಶಿಕ್ಷಣ ಒದಗಿಸುವ ಮೂಲಕ ಪುರುಷರಂತೆ ಅವಳು ಎಲ್ಲಾ ರಂಗಗಳಲ್ಲೂ ಮುಂದೆ ಬರಬಹುದು.ಆ ನಿಟ್ಟಿನಲ್ಲಿ ಮಹಿಳೆಯರು ಮುಂದಾಗಬೇಕು. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಆತ್ಮವಿಶ್ವಾಸವನ್ನು ತೋರಬೇಕೆಂದು ಹೇಳಿದರು.
ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶಕುಂತಲಾ ಸಾಕ್ರೆ ಮಾತನಾಡಿ,ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಸಮಾಜದಲ್ಲಿ ಆರ್ಥಿಕ ಸುಧಾರಣೆಯನ್ನು ಹೊಂದುವ ಸಲುವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಸರಕಾರದಿಂದ ಮಹಿಳೆಯರ ಶ್ರೇಯೋಭಿವೃದ್ದಿಗೆ ಹಲವು ಯೋಜನೆಗಳನ್ನು ಹೊರತಂದಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಮಳೆಯರಿಗೆ ಪುರು?ರಂತೆ ಸಮಾನ ಅವಕಾಶಗಳನ್ನು ನೀಡಲಾಗುತ್ತಿದೆ.ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ.ಆದ್ದರಿಂದ ಹೆಣ್ಣು ಸಮಾಜವನ್ನು ತಿದ್ದುತ್ತಾಳೆ ಮತ್ತು ಇತರರಿಗೆ ಕಲಿಸುತ್ತಾಳೆ.ಒಂದು ಸಂಸಾರದ ನೌಕೆಯನ್ನು ಸಾಗಿಸುವಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯ.ಆದ್ದರಿಂದ ಭಾರತ ಮಾತೆಗೆ ಮಾತೃ ಸ್ಥಾನವನ್ನು ನೀಡಿದ್ದೆವೆ.ಮಹಿಳೆ ಆರ್ಥಿಕವಾಗಿ ಸಬಲರಾಗಿ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಮೇಲ್ವಿಚಾರಕಿಯರಾದ ನೇತ್ರಾವತಿ, ನಾಗಮ್ಮ, ರೇಖಾ,, ಲಕ್ಷ್ಮಿ, ಇಂದಿರಾ, ಕೀರ್ತಿ, ರೇಖಾ, ಕಿರಣ, ಅಶೋಕ ತುಂಗಳ, ಲಕ್ಷ್ಮಿಕಾಂತ ಇತರರು ಇದ್ದರು.