ಬಿಜೆಪಿ ಸಮಾಜದ ಕೋಮು ಸಾಮರಸ್ಯ ಕದಡುವ ಘಟನೆಗಳಿಗೆ ಕುಮ್ಮಕ್ಕು ನೀಡುತಿದೆ: ಸಿದ್ದು

0
49

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಮಾಜದ ಕೋಮು ಸಾಮರಸ್ಯ ಕದಡುವಂತಹ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಾ, ಆ ಮೂಲಕ ರಾಜಕೀಯ ಲಾಭ ಪಡೆಯುವ ಹವಣಿಕೆಯಲ್ಲಿದೆ. ಈ ಲೆಕ್ಕಾಚಾರವೇ ಮುಂದೆ ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದುರಿದ್ದಾರೆ.

ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಇಷ್ಟುದಿನ ಯಾರಿಗೆ ತೊಂದರೆ ಆಗಿತ್ತು? ಕಣ್ಣೆದುರೇ ಸಮಾಜದ ಸಾಮರಸ್ಯ ಕುಸಿದುಬೀಳುತ್ತಿದ್ದರೂ, ಅದಕ್ಕೆ ಕಾರಣವಾದ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗದಷ್ಟು ಮುಖ್ಯಮಂತ್ರಿಗಳು ಅಸಮರ್ಥರೇ?ದಿನೇ ದಿನೆ ರಾಜ್ಯದಲ್ಲಿ ಇಷ್ಟೊಂದು ಅಶಾಂತಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಈ ಬಗ್ಗೆ ಮಾತನಾಡದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರದು ಈ ಎಲ್ಲಾ ಸಮಾಜ ವಿರೋಧಿ ಕೃತ್ಯಗಳಿಗೆ ಸಹಮತವೋ ಅಥವಾ ಕಾನೂನು ಕ್ರಮ ಜರುಗಿಸಲಾಗದ ಅಸಹಾಯಕತೆಯೋ? ಎಂದು ಪ್ರಶ್ನಿಸಿದ್ದಾರೆ.

Contact Your\'s Advertisement; 9902492681

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದ ಹಿತಾಸಕ್ತಿ ಮತ್ತು ಜನರ ಭವಿಷ್ಯದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗುವ ಮುನ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು ಎಂದು ಕಿವಿಹಿಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here