ಮಾನವ ಸರಪಳಿ ರಚಿಸಿ ಮಳೆ ನೀರು ಕೊಯ್ಲು ಜಾಗೃತಿ

0
67

ಬೀದರ್: ಶಿಕ್ಷಣದ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾgನೀರು ಉಳಿಸಿ ಜಗತ್ತು ಉಳಿಸಿ, ನಿಸರ್ಗ ಉಳಿಸಿ ಅಭಿಯಾನ ನಡೆಸುವ ಮೂಲಕ ಗಮನ ಸೆಳೆದರು.

ಕಾಲೇಜಿನ ೩,೮೨೫ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಏಕಕಾಲಕ್ಕೆ ಮಾನವ ಸರಪಳಿ ರಚಿಸಿ ನೀರಿನ ಮಿತ ಬಳಕೆ ಹಾಗೂ ಮಳೆ ನೀರು ಕೊಯ್ಲು ಜಾಗೃತಿ ಮೂಡಿಸಿದರು.

Contact Your\'s Advertisement; 9902492681

ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ಮಾತನಾಡಿ, ಈಚಿನ ವರ್ಷಗಳಲ್ಲಿ ಮಳೆ ಕೊರತೆ ಹೆಚ್ಚಾಗಿದೆ. ಹೀಗಾಗಿ ಬಿದ್ದಷ್ಟೂ ಮಳೆ ನೀರನ್ನು ಸಂಗ್ರಹಿಸಿ, ಮರು ಬಳಕೆ ಮಾಡಬೇಕಾಗಿದೆ. ಮಳೆ ನೀರು ಕೊಯ್ಲು ಆಂದೋಲನದ ಮಾದರಿಯಲ್ಲಿ ನಡೆಯಬೇಕಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಕಟ್ಟಡಗಳಿಗೆ ಮಳೆ ನೀರು ಕೊಯ್ಲು ವಿಧಾನವನ್ನು ಅಳವಡಿಸಬೇಕು. ನೀರನ್ನು ಹಿತ ಮಿತವಾಗಿ ಬಳಸಬೇಕು ಎಂದು ಅವರು ಸಲಹೆ ಮಾಡಿದರು. ಪರಿಸರ ಸಮತೋಲನ ಕಾಪಾಡಲು ಮನೆ, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಸಸಿಗಳನ್ನು ನೆಟ್ಟು ಪೋಷಿಸಬೇಕು. ನಿಸರ್ಗ ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.

ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ನಿರ್ದೇಶಕ ಮಹಮ್ಮದ್ ಆರಿಫ್, ಕಾರ್ಯಕ್ರಮದ ಉಸ್ತುವಾರಿ ಮಹಮ್ಮದ್ ಖುರ್ಷಿದ್, ವಿವಿಧ ಇಲಾಖೆಗಳ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜಿಲ್ಲಾ ಪಂಚಾಯಿತಿ, ಅರಣ್ಯ, ತೋಟಗಾರಿಕೆ, ಕೃಷಿ ಮತ್ತಿತರ ಇಲಾಖೆಗಳ ಸಹಯೋಗದೊಂದಿಗೆ ನಡೆದ ನಿಸರ್ಗ ಜಾಗೃತಿ ಅಭಿಯಾನವು ಪರಿಸರ ಸಂರಕ್ಷಣೆ ಬಗೆಗೆ ಜನರನ್ನು ಚಿಂತನೆಗೆ ಹಚ್ಚುವಲ್ಲಿ ಯಶಸ್ವಿಯಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here