ಕಲಬುರಗಿ: ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಶ್ಯಾಮರಾವ ಸೂರನ್ ಇವರ ಆದೇಶದ ಮೇರೆಗೆ ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷದ ಕಲಬುರಗಿ ದಕ್ಷಿಣ ಮತಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗ ಅಧ್ಯಕ್ಷರನ್ನಾಗಿ ರೇವಪ್ಪಾ ಗಾಜರೆ (ಸುನೀಲ) ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಜಾತ್ಯಾತೀತ ಜನತಾದಳದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಸಿದ್ದಣ್ಣ ಎಸ್.ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಕಲಬುರಗಿ, ದಕ್ಷಿಣ ಮತಕ್ಷೇತ್ರದಲ್ಲಿ ಜಾತ್ಯಾತೀತ ಜನತಾ ದಳ ಪಕ್ಷವನ್ನು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮೂಖರಾಗುತ್ತಿರೆಂದು ನಿಮ್ಮನ್ನು ಗುರುತಿಸಿ ನೇಮಕ ಮಾಡಿ ಆದೇಶ ಹೋರಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಬೇಡ್ಕರ್ ೧೩೧ನೇ ಜಯಂತೋತ್ವವ: ಉಚಿತ ಕಣ್ಣಿನ ತಪಾಸಣೆ ಶಿಬಿರಕ್ಕೆ ತಿಪ್ಪಣ್ಣಪ್ಪ ಕಮಕನೂರ ಚಾಲನೆ
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಸುರೇಶ ಮಾಹಗಾಂಕರ್, ಹಣಮಂತ ಕಂದಳ್ಳಿ, ರಾಮಚಂದ್ರ ಅಟ್ಟೂರ್ ಇದ್ದರು.