ಹಿಂದೂ ಕಾರ್ಯಕರ್ತೆ ದಿವ್ಯ ಹಾಗರಗಿ ಮನೆ ಮೇಲೆ ಸಿಐಡಿ ದಾಳಿ

0
311

ಕಲಬುರಗಿ: ರಾಜ್ಯದಲ್ಲಿ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಭಾರಿ ಅಕ್ರಮ‌ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಕಾರ್ಯಕರ್ತೆ, ಬಿಜೆಪಿ ನಾಯಕಿಯಾಗಿರುವ ದಿವ್ಯ ಹಾಗರಗಿ ಹೆಸರು ಕೇಳಿಬರುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದಿವ್ಯ ಹಾಗರಗಿ ಅವರ ಮನೆಯ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿರುವ ವೇಳೆ ನಾಪತೆಯಾಗಿರುವುದು ಹಲವು ಅನುಮಾನಗಳಿಗೆಡೆ ಮಾಡಿಕೊಟ್ಟಿದೆ.

ದಿವ್ಯ ಹಾಗರಗಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್​ ಮೀಡಿಯಂ ಶಾಲೆಯಲ್ಲಿ ನಡೆದ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದೆ.

Contact Your\'s Advertisement; 9902492681

ಇದನ್ನೂ ಓದಿ: ಗಲಭೆಗಳಿಗೆ ಬಿಜೆಪಿ ಸರಕಾರ ಕುಮ್ಮಕ್ಕು ನೀಡುತ್ತಿದೆ: ಖಂಡ್ರೆ ಕಿಡಿ

ಭಾನುವಾರ ಸಿಐಡಿ ಡಿವೈಎಸ್​ಪಿ ಶಂಕರಗೌಡ ನೇತೃತ್ವದ ತಂಡ ಕಲಬುರಗಿಯ ಹಳೆ ಜೇವರ್ಗಿ ರಸ್ತೆಯಲ್ಲಿರುವ ಬಿಜೆಪಿ ನಾಯಕಿ ಹಾಗೂ ಹಿಂದೂಪರ ಕಾರ್ಯಕರ್ತೆ ದಿವ್ಯಾ ಹಾಗರಗಿ ಮನೆಗೆ ತಪಾಸಣೆಗೆ ಆಗಮಿಸಿದರು. ಕಳೆದ ಮೂರ್ನಾಲ್ಕು ದಿನಗಳಿಂದ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ. ಸಿಐಡಿ ತಂಡ ದಿವ್ಯಾ ಅವರ ಪತಿ ರಾಜೇಶ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ದಿವ್ಯಾ ಹಾಗರಗಿ ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ನಾಯಕರೆಲ್ಲರಿಗೂ ಹತ್ತಿರದವರಾಗಿದ್ದು, ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಹೋಗುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ. ಸದ್ಯಕ್ಕಂತೂ ಸಿಐಡಿಯ ನೇತೃತ್ವದಲ್ಲಿ ತನಿಖೆ ಸರಿಯಾದ ದಿಕ್ಕಿನತ್ತ ಸಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ | JDS State President

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here