ಸುರಪುರ: ಇದೇ ೨೦ನೇ ತಾರೀಖು ನಗರದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ: ಆರ್.ವಿ.ನಾಯಕ ತಿಳಿಸಿದರು.
ನಗರದ ತಹಸೀಲ್ ಕಚೇರಿಯಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ನೇತೃತ್ವದಲ್ಲಿ ನಡೆದ ಆರೋಗ್ಯ ಮೇಳೆದ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕುಗಳಲ್ಲಿ ಸರಕಾರದಿಂದ ಆರೋಗ್ಯ ಮೇಳವನ್ನು ನಡೆಸಲು ನಿರ್ದೇಶನವಿದೆ.ಅದರಂತೆ ನಮ್ಮ ಸುರಪುರ ನಗರದಲ್ಲಿ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿ ೨೦ನೇ ತಾರೀಖು ಬೆಳಿಗ್ಗೆ ೧೦ ಗಂಟೆಗೆ ಆರೋಗ್ಯ ಮೇಳ ಆರಂಭಗೊಳ್ಳಲಿದ್ದು.ಸ್ಥಳಿಯ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಹಾಗೂ ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ: ಹಿಂದೂ ಕಾರ್ಯಕರ್ತೆ ದಿವ್ಯ ಹಾಗರಗಿ ಮನೆ ಮೇಲೆ ಸಿಐಡಿ ದಾಳಿ
ಒಟ್ಟು ೧೪ ಮಳಿಗೆಗಳನ್ನು ತೆರೆಯಲಾಗಿದ್ದು ಕ್ಯಾನ್ಸರ್,ಹೃದಯ ಸಂಬಂಧಿ,ಮಧುಮೇಹ,ಸಕ್ತದೊತ್ತಡ,ಇಎನ್‌ಟಿ ಸೇರಿದಂತೆ ಎಲ್ಲಾ ವಿಧದ ಕಾಯಿಲೆಗಳ ತಪಾಸಣೆ ನಡೆಸಲಾಗುತ್ತದೆ.ವಿವಿಧ ಕಡೆಗಳಿಂದ ತಜ್ಞ ವೈದ್ಯರು ಆಗಮಿಸಿ ಪರೀಕ್ಷಿಸಲಿದ್ದಾರೆ. ಅಲ್ಲದೆ ಚಿಕಿತ್ಸೆಯ ಅಗತ್ಯವಿರುವವರಿಗೆ ಸರಕಾರದಿಂದ ಚಿಕಿತ್ಸೆಗೆ ಕಳುಹಿಸಲಾಗುವುದು ಎಂದು ತಿಳಿಸಿದರು.ಆದ್ದರಿಂದ ೨೦ ರಂದು ತಾಲೂಕಿನ ಜನರು ಈ ಆರೋಗ್ಯ ತಪಾಸಣಾ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಿಪ್ಪಾರಡ್ಡಿ ಪಾಟೀಲ್,ಸಿಡಿಪಿಓ ಲಾಲಸಾಬ್ ಪೀರಾಪುರ ಸೇರಿದಂತೆ ವಿವಿಧ ಅಧಿಕಾರಿಗಳಿದ್ದರು.
ಇದನ್ನೂ ಓದಿ: ರಾಜ್ಯದಲ್ಲಿನ ಗುತ್ತಿಗೆದಾರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು-ರಾಜಾ ಮುಕುಂದ ನಾಯಕ