ಕಲಬುರಗಿ: ಮಹಾನಗರ ಪಾಲಿಕೆ ಆಯುಕ್ತರಿಂದ ಇಂದು ನಗರದ ಡೌನ್ ಹಾಲ್ ನಲ್ಲಿ ‘ಜನ ಸೇವಾ’ ಕಾರ್ಯಕ್ರಮ ಅಯೋಜಿಸಲಾಗಿತ್ತು. ಕಾರ್ಯಕ್ರಮ ಪ್ರತಿ ಮಂಗಳವಾರ ಅಯೋಜನೆಗಳುತ್ತಿದ್ದು, ಎರಡನೇ ಜನ ಸೇವಾ ಕಾರ್ಯಕ್ರಮ ಇದ್ದಾಗಿತ್ತು.
ಪಾಲಿಕೆಯ ಆಯುಕ್ತರಾದ ಫೌಜಿಯಾ ತರನ್ನುಮ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಲಬುರಗಿ ಪಾಲಿಕೆ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆಗೆಗಳಿಗೆ ತಕ್ಷಣ ಪರಿಹಾರ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಮೊದಲನೆ ಜನ ಸೇವಾ ಕಾರ್ಯಕ್ರಮದಲ್ಲಿ ಒಟ್ಟು 65 ದೂರುಗಳು ಬಂದಿದ್ದು, ದೂರಗಳ ಪೈಕಿ 50 ದೂರಗಳು ಇತ್ಯರ್ಥ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇಂದು ಹಮ್ಮಿಕೊಂಡ ಜನ ಸೇವಾ ಕಾರ್ಯಕ್ರಮದಲ್ಲಿ 30 ಅರ್ಜಿಗಳು ಬಂದಿದ್ದು, ಅರ್ಜಿಗೆ ಸಂಬಂಧಿಸಿದಂತೆ ಪಾಲಿಕೆಯ ಅಧಿಕಾರಿಗೊಳಂದಿಗೆ ಚರ್ಚಿಸಿ ಸಮಸ್ಯೆಗಳು ನಿವಾರಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸೇರಿದಂತೆ ಪಾಲಿಕೆಯ ಹಿರಿಯ ಅಧಿಕಾರಿಗಳು ಹಾಗೂ ಮುಂತಾದವರು ಇದ್ದರು.